Home ಕ್ರೈಂ ಸುದ್ದಿಗಳು ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

ಬೀದರ್: ಸಾಲ ಬಾಧೆ ತಾಳದೆ ತಾಲ್ಲೂಕಿನ ಸಂಗೋಳಗಿ ಗ್ರಾಮದ ರೈತ ಹರೀಶ್ ಬಸವರಾಜ ಅಲ್ಲೂರೆ (24) ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹರೀಶ್ ಕಳೆದ ವರ್ಷ ಹಾಗೂ ಈ ವರ್ಷ ಕೃಷಿ ಚಟುವಟಿಕೆಗಾಗಿ ಗ್ರಾಮದ ಪಿಕೆಪಿಎಸ್ ಹಾಗೂ ಖಾಸಗಿ ವ್ಯಕ್ತಿಗಳಿಂದ ರೂ. 4 ಲಕ್ಷ ಸಾಲ ಪಡೆದಿದ್ದರು.
ಮಳೆ ಇಲ್ಲದ ಕಾರಣ ಬೆಳೆ ಬೆಳೆದಿರಲಿಲ್ಲ. ಇದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತಗಡಿನ ಕೆಳಗಿನ ಕಟ್ಟಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಗದಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.