
ಯಾದಗಿರಿ: ಜಿಲ್ಲೆಯ ಮೋಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹೊಸಳ್ಳಿ ಗ್ರಾಮದ ದಲಿತ ಕ್ರಿಶ್ಚಿಯನ್ ಕಾಲೋನಿಯಲ್ಲಿ ಎರಡು ಬೋರ್‌ವೆಲ್‌ಗಳು ಕೆಟ್ಟು ೧೬ ದಿನ ಕಳೆದರೂ ದುರಸ್ತಿಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.
ಎರಡು ಮೋಟಾರ್‌ಗಳು ಹಾಗೂ ಮೂರು ಪೈಪ್‌ಗಳು ಬೋರ್‌ವೆಲ್‌ಗಳ ಆಳದಲ್ಲಿ ಬಿದ್ದಿದ್ದು, ಸಮಸ್ಯೆ ಅಧಿಕಾರಿಗಳ ಗಮನಕ್ಕೆ ತಂದರೂ ಪರಿಹಾರ ದೊರೆತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಆರೋಪಿಸಿದೆ.
ಈ ಕುರಿತು ಜಿಲ್ಲಾ ಉಪಾಧ್ಯಕ್ಷ ಸುಭಾಷ್ ನಡುವಿನಕೇರಿ ನೇತೃತ್ವದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಬೋರ್‌ವೆಲ್‌ಗಳನ್ನು ದುರಸ್ತಿಗೊಳಿಸಿ ನೀರು ಪೂರೈಕೆ ಆರಂಭಿಸಬೇಕು. ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಪಿಡಿಒ ವಿರುದ್ಧ ತನಿಖೆ ನಡೆಸಿ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಸಮಸ್ಯೆ ಶೀಘ್ರ ಪರಿಹಾರವಾಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಪ್ರಫುಲ್ಲಕುಮಾರ್ (ಜುಮ್ಮಿ) ಸೇರಿದಂತೆ ಇತರರು ಉಪಸ್ಥಿತರಿದ್ದರು.






















