
ಯಡ್ರಾಮಿ: ಜ.೬:ಜೇವರ್ಗಿ ತಾಲ್ಲೂಕಿನ ಯಳವಾರ ಗ್ರಾಮ ಪಂಚಾಯಿತಿಯಲ್ಲಿ ಸತತ ೫ ವರ್ಷಗಳಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸಾ ಕೊಡದೆ ಅನ್ಯಾಯದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ವತಿಯಿಂದ ಧರಣಿ ಹಮ್ಮಿಕೊಳ್ಳಲಾಯಿತ್ತು.
ಯಾಳವಾರ ಪಂಚಾಯತಿ ಮುಂದೆ ಸೋಮವಾರ ತಕ್ಷಣ ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಜ ೫ರಂದು ಬೆಳಗ್ಗೆ ೧೧ ಗಂಟೆಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಪ್ರಸ್ತುತ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಹೊಡೆತಕ್ಕೆ ಸಿಲುಕಿ ಗ್ರಾಮೀಣ ಭಾಗದ ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ.
ಜೀವನ ಸಾಗಿಸಲು ಕುಲಿಕಾರ್ಮಿಕರು ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ ಎಳ್ಳು ಗ್ರಾಮಗಳಿಗೆ ಕೆಲಸಾ ನೀಡಿ ಆಸರೆಯಾಗಬೇಕಾದ ಪಂಚಾಯತಿ ಕುಲಿಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ.
ನಗರ ಪ್ರದೇಶಗಳಿಗೆ ಹೋಗುವುದನ್ನು ತಡೆಗಟ್ಟಲು ಸರಕಾರ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಕೇವಲ ಉದ್ಯೋಗ ಮಾತ್ರವಲ್ಲದೆ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ.
ಈ ವೇಳೆಯಲ್ಲಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಬಂದು ಒಂದು ವಾರದ ಸಮಯ ಕೋಡಿ ಮೇಲಾಧಿಕಾರಿಗಳ ಗಮನಕ್ಕೆ ತಂದು ತಕ್ಷಣ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದ ಪ್ರಯುಕ್ತ ರೈತ ಸಂಘಟನೆ ಧರಣಿ ವಾಪಾಸ್ ಪಡೆಯಲಾಯಿತ್ತು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಮೈಬುಬ ಪಟೇಲ್ ಸಂಘಟನೆಯ ಬಸುಗೌಡ ಪಾಟೀಲ್ ಗವರ, ಅಲ್ಲಾ ಪಟೇಲ್ ಇಜೇರಿ,ಈರಣ್ಣ ಬಜಂತ್ತಿ, ರೇಣುಕಾ ಯಾಳವಾರ, ದೇವಕ್ಕಿ ಯಾಳವಾರ, ಶರಣು ಬೆಲ್ಲೂರ್, ಬಾಬು ಪೂಜಾರಿ ಇದ್ದರು.






















