Home ಜಿಲ್ಲೆ ಕಬ್ಬಿಗೆ ಟನ್‌ಗೆ ೫,೫೦೦ ಬೆಲೆ ನಿಗದಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಬ್ಬಿಗೆ ಟನ್‌ಗೆ ೫,೫೦೦ ಬೆಲೆ ನಿಗದಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಹುಮನಾಬಾದ್: ಪ್ರತಿ ಟನ್ ಕಬ್ಬಿಗೆ ?೫,೫೦೦ ಬೆಲೆ ನಿಗದಿಪಡಿಸಬೇಕು, ಬರಗಾಲದ ಹಿನ್ನೆಲೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಹಾಗೂ ಬಿಎ???ಸ್ಕೆ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಬೇಕು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ-೬೫ ತಡೆದು ಪ್ರತಿಭಟನೆ ನಡೆಸಿದರು.
ಕಬ್ಬು ಬೆಳೆಗಾರರು ಹಲವು ಸಮಸ್ಯೆಗಳಿಂದ ಸಂಕಷ್ಟ ಎದುರಿಸುತ್ತಿದ್ದು, ಕೃಷಿಗೆ ಮಾಡಿದ ಖರ್ಚು ಕೂಡ ಮರಳಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರತಿ ಟನ್ ಕಬ್ಬಿಗೆ ೫,೫೦೦ ಬೆಲೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬರಗಾಲದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಂಪೂರ್ಣ ಸಾಲಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಬಿಎಸ್‌ಎಸ್ಕೆ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಿ ಸ್ಥಳೀಯ ಕಬ್ಬು ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸದೆ ತಕ್ಷಣ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಘಟಕದ ಕಾರ್ಯದರ್ಶಿ ದಿಲೀಪ್ ಕುಲಕರ್ಣಿ, ಜಿಲಾನಿ ಪಟೇಲ್, ರಾಮಣ್ಣ ಜನಕೇರಾ, ರಿಯಾಜ್ ಪಟೇಲ್, ರಾಜಕುಮಾರ್ ಒತಗಿ, ಕರಬಸಪ್ಪ ,ಈಶ್ವರ್ ಸೇರಿದಂತೆ ನೂರಾರು ರೈತರು ಇದ್ದರು.