Home Lead News ಭೀಕರ ಅಪಘಾತ: ಐವರ ಸಾವು

ಭೀಕರ ಅಪಘಾತ: ಐವರ ಸಾವು

ಕೊಪ್ಪಳ,ಜೂ. ೨೭-ಮಂತ್ರಾಲಯಕ್ಕೆ ಹೋಗುತ್ತಿದ್ದ ಮಾರುತಿ ಓಮಿನಿ ವ್ಯಾನ್ ಗೆ ಏಕಾಏಕಿ ರಸ್ತೆ ವಿಭಜಕ ದಾಟಿ ಬಂದು ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಐವರು ಮೃತಪಟ್ಟಿರುವ ದುರ್ಘಟನೆ ಕುಕನೂರು ತಾಲೂಕಿನ ಭಾನಾಪೂರ ಬಳಿಯ ರಾಷ್ಟ್ರೀಯ ಹೆದ್ದಾರಿ ೬೩ ರಲ್ಲಿ ಇಂದು ಮುಂಜಾನೆ ಸಂಭವಿಸಿದೆ.


ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಬಾಳೆಕಾಯಿ (೩೫), ಅಮೃತಾ ಕೋಟ್ಯಾಳ್ (೨೫) ಹಾಗೂ ರಮೇಶ್ ಬಳ್ಳಾರಿ (೪೫) ಸ್ಥಳದಲ್ಲಿಯೇ ಮೃತಪಟ್ಟರೆ, ಪ್ರವೀಣ್ ಬಾಳೆಕಾಯಿ(೪೦) ಹಾಗೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.


ಮೃತ ನಾಲ್ವರು ಸೇರಿ ೬ ಮಂದಿ ಓಮಿನಿ ವ್ಯಾನ್ ನಲ್ಲಿ ಮುಂಜಾನೆ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗ ಮಧ್ಯದ ಭಾನಾಪೂರ ಬಳಿಯ ರಾಷ್ಟ್ರೀಯ ಹೆದ್ದಾರಿ ೬೩ ರಲ್ಲಿ ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನವೊಂದು ನಿಯಂತ್ರಣ ತಪ್ಪಿ, ಏಕಾಏಕಿ ಡಿವೈಡರ್ ದಾಟಿ ಬಂದು ಎದುರಿನಿಂದ ಬರುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ೬ ಮಂದಿಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.