ಭೀಕರ ಅಪಘಾತ: ನಾಲ್ವರ ಸಾವು

ಬೆಂಗಳೂರು, ಜು. ೧- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಾಕಳಿದುರ್ಗದ ಬಳಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.


ಇನ್ನೋವಾ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ೮ ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.


ಗೌರಿಬಿದನೂರು ಬಳಿಯ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟದ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರದ ೮ ಮಂದಿ ತೆರಳುತ್ತಿದ್ದರು. ಮಾಕಳಿದುರ್ಗದ ಬಳಿ ಲಾರಿಯೊಂದನ್ನು ಹಿಂದಿಕ್ಕಲು ಕಾರು ಚಾಲಕ ಪ್ರಯತ್ನಿಸಿದ್ದು, ಎದುರಿನ ಕೆಎಸ್‌ಆರ್‌ಟಿಸಿ ಬಸ್ ಬಂ

ದಿದೆ. ಆಗ ಬಸ್ ಮತ್ತು ಲಾರಿಯಿಂದ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾಲು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಮೃತಪಟ್ಟವರನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಮತ್ತು ನಾರಾಯಣಪ್ಪ ಎಂದು ಗುರುತಿಸಲಾಗಿದೆ.


ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.