Home ಕ್ರೈಂ ಸುದ್ದಿಗಳು ಯಾದಗಿರಿ-ಹೈದರಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ : ವ್ಯಕ್ತಿ ದುರ್ಮರಣ

ಯಾದಗಿರಿ-ಹೈದರಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ : ವ್ಯಕ್ತಿ ದುರ್ಮರಣ

ಯಾದಗಿರಿ:ಮೇ.8:ಯಾದಗಿರಿ-ಹೈದರಾಬಾದ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಯಾದಗಿರಿ ನಗರದ ನಿವಾಸಿಯಾಗಿದ್ದ ಕೃಷ್ಣ ತಂದೆ ಬಾಬು ಎಂದು ಗುರುತಿಸಲಾಗಿದೆ.

ಮೂಲತಃ ಗಣಪುರ ಗ್ರಾಮದವರಾಗಿದ್ದ ಕೃಷ್ಣ ಅವರು ಯಾದಗಿರಿಯಲ್ಲಿ ವಾಸವಿದ್ದು, ತಮ್ಮ ಸ್ವಗ್ರಾಮ ಗಣಪುರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಕೃಷ್ಣ ಅವರಿಗೆ ಪತ್ನಿ ಹಾಗೂ ಏಳು ವರ್ಷದ ಮಗುವಿದ್ದು, ಅವರ ಅಗಲಿಕೆಯಿಂದ ಕುಟುಂಬದಲ್ಲಿ ಆಕ್ರಂದನ ಮಡುಗಟ್ಟಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸಂಬಂಧಿಕರು ಮತ್ತು ಸ್ಥಳೀಯರು ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಮಿಸಿ ದುಃಖ ವ್ಯಕ್ತಪಡಿಸಿದರು.

ಘಟನೆಯ ಸಂಬಂಧ ಗುರುಮಠಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಲು ಪೆÇಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.