ತಂದೆಯಿAದಲೇ ಮಗಳ ಕೊಲೆ

ಕಲಬುರಗಿ,ನ.೨೨-ವಿಕಲಚೇತನಳಾದ ಮಗಳನ್ನು ತಂದೆಯೇ ಕೊಲೆ ಮಾಡಿ ನೇಣು ಹಾಕಿರುವ ಘಟನೆ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದ್ದು, ಈ ಸಂಬAಧ ಆರೋಪಿ ಗುಂಡೆರಾವ ನೀಲೂರ್ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಲ್ಲಹಂಗರಗಾ ಗ್ರಾಮದಲ್ಲಿ ವಿಕಲಚೇತನಳಾದ ಕುಮಾರಿ ಮಂಜುಳಾ (೧೭)ಳನ್ನು ಕೊಲೆ ಮಾಡಿ ನೇಣು ಹಾಕಲಾಗಿತ್ತು. ಈ ಸಂಬAಧ ಬಾಲಕಿಯ ತಾಯಿ ವಿಮಲಾಬಾಯಿ ನೀಲೂರ್ ಅವರು ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ವಿಕಲಚೇತನಳಾದ ತಮ್ಮ ಮಗಳನ್ನು ಯಾವುದೋ ದುರುದ್ದೇಶದಿಂದ ಹೊಡೆದು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು. ಅಲ್ಲದೆ ಹೊಲದ ಹಾದಿಯ ವಿಷಯಕ್ಕೆ ಕೊಲೆ ಮಾಡಿರಬಹುದು ಎಂದು ಅವರು ಗ್ರಾಮದ ಕಲ್ಯಾಣಿ ತಂದೆ ಜಗದೀಶ, ಗುಂಡಪ್ಪ ತಂದೆ ಜಗದೀಶ ಮತ್ತು ಮಲ್ಲಿಕಾರ್ಜುನ ತಂದೆ ಜಗದೀಶ ಮೇಲೆ ಸಂಶಯ ವ್ಯಕ್ತಪಡಿಸಿದ್ದರು. ಈ ಸಂಬAಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆಗೆ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ಹೆಚ್.ನಾಯಕ್ ಅವರ ಮಾರ್ಗದರ್ಶನದಲ್ಲಿ ಸಬ್-ಅರ್ಬನ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಸವೇಶ್ವರ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪಿಐ ಭೋಜರಾಜ ರಾಠೋಡ್, ಪಿಎಸ್‌ಐ ಬಸವರಾಜು, ಎಎಸ್‌ಐ ನಾಗರಾಜ, ಸಿಬ್ಬಂದಿಗಳಾದ ಮಂಜುನಾಥ, ಅಶೋಕ, ಫಿರೋಜ್ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು. ಈ ತಂಡ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿ ಮೃತಳ ತಂದೆ ಗುಂಡೇರಾಯ ತಂದೆ ಚಂದ್ರಶಾ ನೀಲೂರ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆರೋಪಿಯು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವನ್ನು ಅವರು ಶ್ಲಾಘಸಿದರು.
ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ಹೆಚ್.ನಾಯಕ್ ಅವರ ಮಾರ್ಗದರ್ಶನದಲ್ಲಿ ಸಬ್-ಅರ್ಬನ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಸವೇಶ್ವರ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪಿಐ ಭೋಜರಾಜ ರಾಠೋಡ್, ಪಿಎಸ್‌ಐ ಬಸವರಾಜು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.