
ಕಲಬುರಗಿ,ಅ.1-ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹೊಸ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು.
ಹಿರಿಯ ನ್ಯಾಯವಾದಿ ರಾಜೇ ಶಿವಶರಣಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್, ರೆಡ್‍ಕ್ರಾಸ್ ಸಂಸ್ಥೆಯ ಅರುಣಕುಮಾರ ಲೋಯಾ, ಸಂಗಮ್ಮ, ಅಬ್ದುಲ್ ಪಾಶಾ ಗೋಟೂರ್ ಸೇರಿದಂತೆ ಮತ್ತಿತರ ಗಣ್ಯರು ವೇದಿಕೆ ಮೇಲಿದ್ದರು.
ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿರಿಯ ನಾಗರಿಕರಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು.






















