Home ಜಿಲ್ಲೆ ವಿದ್ಯಾರ್ಥಿನಿಯರು ಶಿಕ್ಷಣ ಮತ್ತು ಸ್ವಾವಲಂಬನೆಗೆ ಆದ್ಯತೆ ನೀಡಬೇಕು

ವಿದ್ಯಾರ್ಥಿನಿಯರು ಶಿಕ್ಷಣ ಮತ್ತು ಸ್ವಾವಲಂಬನೆಗೆ ಆದ್ಯತೆ ನೀಡಬೇಕು

ಗದಗ,ಆ೭: ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಪೂರ್ಣಗೊಳಿಸಿ, ಸ್ವಾವಲಂಬಿಗಳಾಗಬೇಕು. ತಮ್ಮ ಕಾಲ ಮೇಲೆ ತಾವು ನಿಲ್ಲುವವರೆಗೆ ಪ್ರೀತಿ, ಪ್ರಣಯ ಅಥವಾ ಮದುವೆಯಂತಹ ನಿರ್ಧಾರಗಳಿಗೆ ಮುಂದಾಗಬಾರದು. ಭವಿಷ್ಯ ಹಾಗೂ ಗುರಿ ಸಾಧನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿ÷?ಮ ಚೌಧರಿ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಗದಗ ಇವರ ಸಹಯೋಗದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಂವಾದ ಮತ್ತು ಅರಿವು ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ವಯೋಸಹಜವಾಗಿ ಹಾರ್ಮೋನ್‌ಗಳ ಬದಲಾವಣೆಯಿಂದ ತಾತ್ಕಾಲಿಕ ಆಕರ್ಷಣೆ ಉಂಟಾಗುವುದು ಸಹಜ. ಆದರೆ ಈ ವಯಸ್ಸಿನಲ್ಲಿ ಪ್ರೀತಿಯ ಬಲೆಗೆ ಬಿದ್ದು, ೧೮ ವರ್ಷ ತುಂಬುತ್ತಿದ್ದAತೆ ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳು ಇಡೀ ಜೀವನದ ಮೇಲೆ ದುಷ್ಪರಿಣಾಮ ಬೀರಬಹುದು. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ನನ್ನ ಮಗಳು ಯಾರ ಮುಂದೆಯೂ ಕೈಚಾಚಬಾರದು, ಬದಲಾಗಿ ಇತರರಿಗೆ ಕೊಡುವಂತಾಗಬೇಕು ಎಂಬುದು ಪೋಷಕರ ಕನಸಾಗಿರುತ್ತದೆ. ಆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ತಮ್ಮ ಸ್ವಂತ ಸಂಪಾದನೆ ಹಾಗೂ ಸ್ವಾವಲಂಬಿಗಳಾಗಬೇಕು ಎಂದರು.

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಎಚ್ಚರಿಕೆ:
ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರೊಫೈಲ್‌ಗಳನ್ನು ಖಾಸಗಿಯಾಗಿ (ಪ್ರೆöÊವೇಟ್) ಇಟ್ಟುಕೊಳ್ಳಬೇಕು. ಅಪರಿಚಿತರ ಫ್ರೆಂಡ್ ರಿಕ್ವೆಸ್ಟ÷್ಗಳನ್ನು ಸ್ವೀಕರಿಸಬಾರದು. ಮೊಬೈಲ್ ಪರದೆಯ ಹಿಂದಿದ್ದುಕೊAಡು ಹೆಣ್ಣುಮಕ್ಕಳನ್ನು ಬಲೆಗೆ ಬೀಳಿಸುವ ಜಾಲಗಳು ಹೆಚ್ಚಾಗುತ್ತಿವೆ. ಡೇಟಿಂಗ್ ಆÄ?ಯಪ್ ಗಳು ಹಾಗೂ ನಕಲಿ ಪ್ರೀತಿಯ ಮಾತುಗಳಿಗೆ ಮರುಳಾಗಿ ಮಾನವ ಕಳ್ಳಸಾಗಣೆ, ದೈಹಿಕ ಶೋಷಣೆ ಸೇರಿದಂತೆ ಅಪಾಯಗಳಿಗೆ ಸಿಲುಕಬಾರದು ಎಂದು ಎಚ್ಚರಿಸಿದರು.

ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಪ್ರತಿದಿನ ಕನಿಷ್ಠ ೪ ರಿಂದ ೬ ಗಂಟೆಗಳ ಕಾಲ ಓದಿನತ್ತ ಗಮನಹರಿಸಬೇಕು. ಶ್ರಮ, ಶಿಸ್ತು ಮತ್ತು ಗುರಿಯೊಂದಿಗೆ ಮುನ್ನಡೆದರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು. ಐಎಎಸ್, ಐಪಿಎಸ್, ನ್ಯಾಯಾಧೀಶರು, ವಕೀಲರು ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ವಿದ್ಯಾರ್ಥಿಗಳಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

ಯತ್ರ ನಾರ್ಯಸ್ತು ಪೂಜ್ಯಂತೆ ಎಂಬ ಮಾತು ಕೇವಲ ಪಠ್ಯಕ್ಕೆ ಸೀಮಿತವಾಗಬಾರದು. ಪ್ರತಿಯೊಬ್ಬ ಪುರುಷನು ತನ್ನ ಮನೆಯ ತಾಯಿ, ಪತ್ನಿ ಹಾಗೂ ಮಗಳನ್ನು ಪ್ರೀತಿ ಮತ್ತು ಗೌರವದಿಂದ ನಡೆಸಿಕೊಳ್ಳಬೇಕು. ಮಹಿಳೆಯರಿಗೆ ಗೌರವ ನೀಡುವ ಸಂಸ್ಕöÈತಿ ಮನೆಯಲ್ಲಿಯೇ ಆರಂಭವಾಗಬೇಕು ಎಂದರು.

ಪ್ರಾಮಾಣಿಕವಾಗಿ ಕಷ್ಟಪಟ್ಟು ಗುರಿಯತ್ತ ಸಾಗಿದರೆ ಯಶಸ್ಸು ಸಾಧ್ಯ. ಗುರಿ ಸಾಧಿಸುವ ಛಲ, ಆತ್ಮವಿಶ್ವಾಸ ಹಾಗೂ ಪರಿಶ್ರಮ ಇದ್ದಾಗ ಅವಕಾಶಗಳು ತಾನಾಗಿಯೇ ದೊರೆಯುತ್ತವೆ ಎಂದು ಹೇಳಿದರು.

ಹೆಣ್ಣುಮಕ್ಕಳ ರಕ್ಷಣೆ ಹಾಗೂ ಕೌಟುಂಬಿಕ ಸೌಹಾರ್ದತೆಗಾಗಿ ಶ್ರಮಿಸುತ್ತಿರುವ ಗದಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಇದೇ ಸಂದರ್ಭದಲ್ಲಿ ಡಾ. ನಾಗಲಕ್ಷಿ÷?ಮ ಚೌಧರಿ ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಕಾರ್ಯದರ್ಶಿ ರೂಪಾ. ಆರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣ್ಣಬರಟ್ಟಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್, ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಸವರಾಜ ಈರಣ್ಣನವರ್ ಅವರ ತಂಡದ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು ಸ್ವಾಗತಿಸಿದರು. ಎಸ್.ಎಸ್. ಗೌಡರ್ ನಿರೂಪಿಸಿದರು.