Home ಮುಖಪುಟ ಸುದ್ದಿ ರಾಹುಲ್ ವಿರುದ್ಧ ಎಫ್ ಐಆರ್

ರಾಹುಲ್ ವಿರುದ್ಧ ಎಫ್ ಐಆರ್

ಡೆಹ್ರಾಡೂನ್, ಆ.೩೧ -ಉತ್ತರಾಖಂಡದ ಹಲ್ವಾನಿಯಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿ ಬಣ್ಣ ದ್ವೇಷ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


ಹಲ್ವಾನಿ ವಾಲ್ಮೀಕಿ ಸಮುದಾಯದ ಸದಸ್ಯ ಶ್ರೀರಾಮ ಸೇನಾ ಧಮಾರ್ಥ ಸೇವಾ ನ್ಯಾರ್ಸ್ ಕಾರ್ಯಕರ್ತ ಅಮಿತ್ ಕುಮಾರ್ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳೀಸಿದ್ದಾರೆ.


ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ೧೯೬ ಮತ್ತು ೨೯೯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ೧೯೮೯ರ ಸೆಕ್ಷನ್ ೩(೧)(ಕ್ಯೂ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


ಪರಿಶಿಷ್ಟ ಜಾತಿಗೆ ಸೇರಿದವರಾದ ಕುಮಾರ್, ಆಗಸ್ಟ್ ೧೧ರಂದು ರಾಮಲೀಲಾ ಮೈದಾನದಲ್ಲಿ ನಡೆದ ಸಾಮಾನ್ಯ ಸ್ವಚ್ಛತಾ ಕಾರ್ಯಕ್ಕೆ ರಾಹುಲ್ ಗಾಂಧಿ ಜಾತಿಯ ಆಯಾಮ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗಾಂಧಿ ಈ ಸ್ವಚ್ಛತಾ ಕಾರ್ಯವನ್ನು ಅಸ್ಪೃಶ್ಯತೆಯ ಕೃತ್ಯ ಹಾಗೂ ಅಪರಾಧ ಎಂದು ಬಣ್ಣಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.


ರಾಹುಲ್ ಗಾಂಧಿ ಅವರ ಹೇಳಿಕೆಗಳಿಂದ ಜಾತಿಯ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕುಮಾರ್ ಆರೋಪಿಸಿದ್ದಾರೆ. ಸುಳ್ಳು ಹಾಗೂ ಅಪೂರ್ಣ ಮಾಹಿತಿಯ ಆಧಾರದ ಮೇಲೆ ರಾಹುಲ್ ಗಾಂಧಿ ಪರಿಶಿಷ್ಟ ಜಾತಿಯವರನ್ನು ಗುರಿಯಾಗಿಸುವಂತಹ ಜಾತಿ ಸೂಚಕ ಮತ್ತು ಅವಮಾನಕಾರಿ ಪದಗಳನ್ನು ಬಳಸಿದ್ದು, ಸಮುದಾಯದೊಳಗೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡಲು ಪ್ರಚೋದಿಸಿದ್ದಾರೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.


ನೈನಿತಾಲ್ ಎಸ್‌ಎಸ್‌ಪಿ ಟಿ.ಸಿ. ಮಂಜುನಾಥ್ ಅವರು ಪ್ರಕರಣ ದಾಖಲಿಸಿರುವುದನ್ನು ದೃಢಪಡಿಸಿದ್ದಾರೆ. “ತಮ್ಮ ಆರೋಪಗಳನ್ನು ಸಮರ್ಥಿಸಲು ಅಗತ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಅಮಿತ್ ಸಲ್ಲಿಸಿದ್ದಾರೆ. ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಎಎಸ್‌ಪಿ ಅಮಿತ್ ಸೈನಿ ತನಿಖೆಯ ನೇತೃತ್ವ ವಹಿಸಲಿದ್ದಾರೆ,” ಎಂದು ಅವರು ತಿಳಿಸಿದ್ದಾರೆ.


ಆಗಸ್ಟ್ ೮ರಂದು ಖರ್ಗೆ ಅವರು ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಇದಾದ ಎರಡು ದಿನಗಳ ಬಳಿಕ ಬಲಪಂಥೀಯ ಸಂಘಟನೆಯಾದ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಯಾಸ್ ಸಂಘಟನೆಯ ಸದಸ್ಯರು ಮೈದಾನದ ‘ಶುದ್ಧೀಕರಣ’ಕ್ಕಾಗಿ ಹವನ ನಡೆಸಿದ್ದರು.