ಮಣಿಕಂಠ ರಾಠೋಡ್ ಮೇಲೆ ಎಫ್‍ಐಆರ್ ದಾಖಲು

ಕಲಬುರಗಿ,ಅ.24-ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಪತ್ರಿಕಾಗೋಷ್ಠಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆರೋಪ, ಅವಾಚ್ಯ ಶಬ್ಧಗಳಿಂದ ನಿಂದನೆ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸಿದ್ಧಾರೂಢ ಕಾಂಬಳೆ ಅವರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಈ ದೂರಿನ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್ ಎಫ್‍ಐಆರ್ ದಾಖಲಾಗಿದೆ.
ಮಣಿಕಂಠ ರಾಠೋಡ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಪತ್ರಿಕಾಗೋಷ್ಠಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆರೋಪ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುವುದರ ಜೊತೆಗೆ ಆರ್‍ಎಸ್‍ಎಸ್‍ನವರು ಖರ್ಗೆ ಅವರ ಮನೆಗೆ ನುಗ್ಗುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡು ಅವರನ್ನು ಕರ್ನಾಟದಿಂದ ಶಾಶ್ವತವಾಗಿ ಗಡಿಪಾರು ಮಾಡಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.