
ಜಮಖಂಡಿ:ಮಾ.13: ನಗರದ ಹೊರವಲಯದಲ್ಲಿರುವ ಆಲಗೂರ ಎಂಟಪ್ರ್ರೈಸಸ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 45 ರಿಂದ 50 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅಂಗಡಿ ಮಾಲಿಕ ಮೆಹ್ಮೂದ್ ಸಾದ್ ಸಾಧಿಕ್ ಆಲಗೂರ ಅವರು ಮಾಹಿತಿ ನೀಡಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಮುಧೋಳ ಹಾಗೂ ಜಮಖಂಡಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಕಾರ್ಖಾನೆಯಲ್ಲಿ ತಯಾರಿಸುತ್ತಿದ್ದ ಫರ್ನಿಚರ್, ಸೋಫಾ ಸೇರಿದಂತೆ ಇತರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



























