ಅನನ್ಯ ಆಸ್ಪತ್ರೆಗೆ ಬೆಂಕಿ: ಲಕ್ಷಾಂತರ ರೂಪಾಯಿ ಹಾನಿ

ಕರಜಗಿ:ಜ.9: ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹತ್ತಿರ ಇರುವ ಅನನ್ಯ ಆಸ್ಪತ್ರೆಗೆ ಗುರುವಾರ ಸಂಜೆ ಸುಮಾರು 7:00 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸಕ್ರ್ಯೂಟ್ ಕಾರಣದಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿಯಿಂದ ಆಸ್ಪತ್ರೆಯೊಳಗಿನ ಔಷಧ ಮಳಿಗೆ, ಫರ್ನಿಚರ್, ಫ್ರಿಜ್ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಂದಾಜು ಲಕ್ಷಕ್ಕೂ ಅಧಿಕ ರೂಪಾಯಿ ಮೌಲ್ಯದ ಹಾನಿ ಸಂಭವಿಸಿದೆ.
ಅಪಘಾತದ ವೇಳೆ ಅಕ್ಕಪಕ್ಕದ ಮನೆಯವರು ತಕ್ಷಣ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಪ್ರಯತ್ನಿಸಿ, ಹೆಚ್ಚಿನ ಹಾನಿ ಆಗದಂತೆ ತಡೆದರು. ನಂತರ ಸ್ಥಳಕ್ಕೆ ಆಗಮಿಸಿದ ಬೆಂಕಿ ಆರಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು ಗ್ರಾಮಸ್ತರ ಆಕ್ರೋಶ ವೆಕ್ತ ಪಡಿಸಿದರು
ಸುದ್ದಿ ತಿಳಿದ ತಕ್ಷಣ ತಮ್ಮರಾಯಗೌಡ್ ಪಾಟೀಲ, ಆಳಂದ ಡಿವೈಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಅಫಜಲಪುರ ಪೆÇಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ