Home ಜಿಲ್ಲೆ ಕಲಬುರಗಿ ಬಟ್ಟೆ ಅಂಗಡಿಗೆ ಬೆಂಕಿ: ಕೋಟ್ಯಾಂತರ ರೂ.ಹಾನಿ

ಬಟ್ಟೆ ಅಂಗಡಿಗೆ ಬೆಂಕಿ: ಕೋಟ್ಯಾಂತರ ರೂ.ಹಾನಿ

ಕಲಬುರಗಿ,ಮಾ.7-ನಗರದ ಪುಟಾಣಿಗಲ್ಲಿಯಲ್ಲಿರುವ ಸಿಂಧೂರ ಬಟ್ಟೆ ಅಂಗಡಿಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವುದರ ಮೂಲಕ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ. ಚೌಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.