Home ಜಿಲ್ಲೆ ಕಲಬುರಗಿ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ಸಿಪ್ಪೆಗೆ ಬೆಂಕಿ

ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ಸಿಪ್ಪೆಗೆ ಬೆಂಕಿ

ಆಳಂದ: ತಾಲೂಕಿನ ಬೂಸ್ನೂರ್ ಬಳಿಯ ಸಹಕಾರಿ ಸಂಘದ ಗುತ್ತಿಗೆ ಆಧಾರದ ಮೇಲೆ ಪಡೆದಿರುವ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಸಂಗ್ರಹಿಸಿಡಲಾಗಿದ್ದ ಕಬ್ಬಿನ ಸಿಪೆಗೆ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕಾರ್ಖಾನೆಯ ಕಾರ್ಮಿಕರು ಜಂಟಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಕಾರ್ಖಾನೆಯ ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ.
ಕಾರ್ಖಾನೆಯ ಆವರಣದಲ್ಲಿ ಸಂಗ್ರಹಿಸಲಾಗಿದ್ದ ಕಬ್ಬಿನ ಸಿಬ್ಬೆಗೆ ಬೆಂಕಿ ಹೊತ್ತಿಕೊಂಡಿರುವುದು ಆತಂಕಕ್ಕೆ ಕಾರಣವಾಗಿತ್ತು. ಬೆಂಕಿ ಹರಡುವ ಸಾಧ್ಯತೆಯನ್ನು ಮನಗಂಡು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಕಾಲದಲ್ಲಿ ಕೈಗೊಂಡ ಕ್ರಮದಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಘಟನೆಯಿಂದ ಉಂಟಾಗಿರುವ ನಷ್ಟದ ಪ್ರಮಾಣದ ಕುರಿತು ಕಾರ್ಖಾನೆ ಆಡಳಿತ ಮಂಡಳಿಯು ಬುಧವಾರದವರೆಗೂ ಅಧಿಕೃತ ಮಾಹಿತಿ ನೀಡಿಲ್ಲ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದೂ ಇನ್ನμÉ್ಟೀ ತಿಳಿದುಬರಬೇಕಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಬುದುವಾರ ಆಳಂದ ಸಿಪಿಐ ಜಗದೀಶ್ ತಿಳಿಸಿದ್ದಾರೆ. ಕಾರ್ಖಾನೆಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕುರಿತು ಮುಂದಿನ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಆದರೆ ಕಾರ್ಖಾನೆ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತು ವೇಗವಾದ ಗಾಳಿಯಿಂದ ಹರಡಿತ್ತು ಇದರಿಂದ ಕಾರ್ಖಾನೆಗೆ ಯಾವುದೇ ನಷ್ಟ ಅಥವಾ ಬೆಂಕಿ ತೆಗೆದುಕೊಂಡಿಲ್ಲ ಎಂದು ಕಾರ್ಖಾನೆ ಸಿಬ್ಬಂದಿಯಾಗಿರುವ ಕುಲಕರ್ಣಿ ಎಂಬುವರು ಸ್ಪಷ್ಟಪಡಿಸಿದ್ದಾರೆ.