
ನವಲಗುAದ,ಏ.೧೫: ಪಟ್ಟಣದ ಕಳ್ಳಿಮಠ ಓಣಿಯ ಪ್ರಗತಿಪರ ರೈತರಾದ ಮಲ್ಲಪ್ಪ ಹಳ್ಳದ ಅವರು ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಹೊಟ್ಟು ಹಾಗೂ ಮೇವಿನ ಬಣವಿಗಳಿಗೆ ಆಕಸ್ಮೀಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಗಳ ಹಾನಿ ಸಂಭವಿಸಿದ ಘಟನೆ ಮಂಗಳವಾರ ಮದ್ಯಾಹ್ನ ಜರುಗಿದೆ.
ಬಣವಿಯಲ್ಲಿ ಹೊಗೆಯಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಸಾದ್ಯವಾಗದಿದ್ದುದರಿಂದ. ಪುರಸಭೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಸಹಕರಿಸಿದರು.
ಸುದ್ದಿ ತಿಳಿದ ಶಾಸಕ ಎನ್.ಎಚ್.ಕೋನರಡ್ಡಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ. ಹಾನಿಗೊಳಗಾದ ರೈತರಿಗೆ ಸಾಂತ್ವನ ಹೇಳಿ ಸರಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.
ತಹಶೀಲ್ದಾರ ಸುಧೀರ ಸಾಹುಕಾರ.ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಪೂಜಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






















