Home ಜಿಲ್ಲೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಬಾದಾಮಿ,ಫೆ9: ತಾಲೂಕಿನ ಯಂಕಂಚಿ-ಮಣಿನಾಗರದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ 9ನೇ ತರಗತಿಯ ವಿದ್ಯಾರ್ಥಿನಿಯಾದ ಐಶ್ವರ್ಯ ಹೊಸಮನಿ ಇವಳು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು 10 ಗ್ರಾಮ್ ಬೆಳ್ಳಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.