Home ಜಿಲ್ಲೆ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ


ಬಾದಾಮಿ,ಆ.೨೭: ತಾಲೂಕಿನ ಯಂಕAಚಿ ಮಣಿನಾಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿ ಮತ್ತು ಶ್ರೀ ಟಿ.ಎಸ್.ಗಂಗಲ್ ಸರ್ಕಾರಿ ಪ್ರೌಢ ಶಾಲೆಯ ೧೦ ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಾದ ಐಶ್ವರ್ಯ ಹೊಸಮನಿ ಹಾಗೂ ಸ್ನೇಹಾ ಮಾದರ ಇವರು ರವಿವಾರ ಶಿವಮೊಗ್ಗದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಓಪನ್ ಪಂದ್ಯಾವಳಿಯಲ್ಲಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ, ಬಾದಾಮಿ ತಾಲೂಕಿಗೆ, ಬಾಗಲಕೋಟ ಜಿಲ್ಲೆಗೆ ಹಾಗೂ ಕರ್ನಾಟಕ ರಾಜಕ್ಕೆ ಕೀರ್ತಿ ತಂದಿದ್ದಾರೆ.


ಅಭಿನಂದನೆ: ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಉಪನಿರ್ದೇಶಕ ಎಸ್.ಆರ್.ಸೀತಾರಾಮು, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಆರ್.ಆರ್. ಕುಲಕರ್ಣಿ, ಕೆಜಿಬಿವಿ ಶಾಲೆಯ ಮುಖ್ಯಶಿಕ್ಷಕಿ ಬಸಮ್ಮಾ ನರಸಾಪೂರ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ವಿ.ಗೌಡಪ್ಪಗೌಡರ, ದೈಹಿಕ ಶಿಕ್ಷಕ ಗುರುನಾಥ ಹಾಗೂ ಶಾಲೆಯ ಸಮಸ್ತ ಗುರುಗಳ ಬಳಗ, ಊರಿನ ಗುರುಹಿರಿಯರು, ಕ್ರೀಡಾ ಅಭಿಮಾನಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.