ಲಂಡನ್,ಅ.೩-ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾದ ಭರವಸೆಯ ಬ್ಯಾಟ್ಸ್‌ಮನ್‌ಗಳು ಅದ್ಭುತ ಆಟವಾಡಿ ಮತ್ತು ಇಂಗ್ಲೆಂಡ್‌ಗೆ ಗೆಲ್ಲಲು ೩೭೪ ರನ್‌ಗಳ ಗುರಿಯನ್ನು ನೀಡಿದ್ದು ಈ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅವರು ಹೊಸ ಇತಿಹಾಸವನ್ನೂ ಸೃಷ್ಟಿಸಿದ್ದಾರೆ.
ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್, ಆರಂಭಿಕ ಆಟಗಾರ ಕೆಎಲ್ ರಾಹುಲ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಈ ಸರಣಿಯಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ. ಈ ಮೂಲಕ ಈ ಮೂವರು ಬ್ಯಾಟರ್‌ಗಳು ಈ ಸರಣಿಯಲ್ಲಿ ೫೦೦ ಕ್ಕೂ ಹೆಚ್ಚು ರನ್ ಕಲೆ ಹಾಕಿ ಬೀಗಿದ್ದಾರೆ. ಈ ಮೂಲಕ ಈ ಮೂವರು ಆಟಗಾರರು ಇತಿಹಾಸದ ಪುಟ ಸೇರಿದ್ದಾರೆ. ಭಾರತದ ಪರ ಟೆಸ್ಟ್ ಸರಣಿಯೊಂದರಲ್ಲಿ ೫೦೦ ಕ್ಕೂ ಹೆಚ್ಚು ರನ್ ಗಳನ್ನು ಮೂವರು ಬ್ಯಾಟರ್‌ಗಳು ಸಿಡಿಸಿರಲಿಲ್ಲ. ಈಗ ಗಿಲ್, ರಾಹುಲ್ ಮತ್ತು ಜಡೇಜಾ ಈ ಸಾಧನೆ ಮಾಡಿ ಬೀಗಿದ್ದಾರೆ.
ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಓವಲ್ ಟೆಸ್ಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿಲ್ಲ ಆದರೆ ಸರಣಿಯುದಕ್ಕೂ ರನ್‌ಗಳನ್ನು ಕಲೆ ಹಾಕಿ ಬೀಗಿದ್ದಾರೆ. ಹೆಡಿಂಗ್ಲಿ, ಬರ್ಮಿಂಗ್‌ಹ್ಯಾಮ್‌ನ ಎರಡೂ ಇನಿಂಗ್ಸ್ ಹಾಗೂ ಮ್ಯಾಂಚೆಸ್ಟರ್ ಪಂದ್ಯಗಳಲ್ಲಿ ಶತಕ ಸಾಧನೆ ಮಾಡಿದ್ದಾರೆ. ಈ ಮೂಲಕ ಒಂದೇ ಸರಣಿಯಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಭಾರತದ ನಾಯಕ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಗಿಲ್ ೫ ಪಂದ್ಯಗಳಲ್ಲಿ ಅವರು ಒಟ್ಟು ೭೫೪ ರನ್ ಸಿಡಿಸಿದ್ದಾರೆ.
ಟೀಮ್ ಇಂಡಿಯಾ ಪ್ರಸ್ತುತ ಯುವ ಆಟಗಾರರಿಂದ ತುಂಬಿದೆ, ಮತ್ತು ಈ ಪ್ರವಾಸವು ರವೀಂದ್ರ ಜಡೇಜಾ ಅವರ ಕೊನೆಯ ಪ್ರವಾಸ ಎಂದು ಎಲ್ಲರೂ ಹೇಳುತ್ತಿದ್ದರು. ಆದರೆ ಜಡೇಜಾ ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ಅವರು ತಂಡದ ಬೆನ್ನೆಲುಬಾಗಿದ್ದಾರೆ. ಅವರು ೫ ಪಂದ್ಯಗಳಲ್ಲಿ ಒಟ್ಟು ೫೧೬ ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ೧ ಶತಕ ಮತ್ತು ೫ ಬಾರಿ ೫೦ ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
























