
ಮಾಲೂರು ಜ೨೬: ತಾಲ್ಲೂಕು ಪಂಚಾಯತ್ ಕಛೇರಿ ಮುಂಭಾಗದ ಉದ್ಯಾನವನ, ಧ್ವಜಸ್ತಂಭ ಮತ್ತು ಕಛೇರಿಯ ಅಧಿಕಾರಿ ಸಿಬ್ಬಂದಿಯವರ ವಾಹನ ಪಾಕಿಂಗ್ ಕಾಮಗಾರಿಯನ್ನು ಶಾಸಕ ಕೆ.ವೈ. ನಂಜೇಗೌಡ ಆವರು ಲೋಕಾರ್ಪಣೆ ಗೊಳಿಸಿ ೭೭ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ೨೮ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳು ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಪಂಚಾಯಿತಿ ಕಾರ್ಯನಿರ್ವಹಿಸುತ್ತಿದೆ ತಾಲೂಕಿನ ೨೮ ಪಂಚಾಯಿತಿಗಳು ಸ್ವಂತ ಕಟ್ಟಡವನ್ನು ಹೊಂದಿದ್ದು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಸ್ವಚ್ಛತೆ ಅಭಿವೃದ್ಧಿ ಕಾಮಗಾರಿಗಳು ತಾಲೂಕು ಪಂಚಾಯಿತಿ ಉಸ್ತುವಾರಿಯಲ್ಲಿ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸರ್ಕಾರದ ಅನುದಾನದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಶ್ರಮಿಸಿದ್ದಾರೆ. ಕಾರ್ಯಾಲಯದ ಮುಂಭಾಗದಲ್ಲಿ ಧ್ವಜಸ್ಥಂಭ ಉದ್ಯಾನವನ ಇನ್ನಿತರೆ ಕಾಮಗಾರಿಗಳನ್ನು ಕೈಗೊಳ್ಳುವುದರ ಮೂಲಕ ಗಣರಾಜ್ಯ ದಿನದಂದು ಲೋಕಾರ್ಪಣೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಮ್ಮದೇ ಆದ ಸಂವಿಧಾನವನ್ನು ಅಂಗೀಕರಿಸಿ ಪ್ರತಿ ವರ್ಷ ಜನವರಿ ೨೬ರಂದು ಗಣರಾಜ್ಯ ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನ ಹಾಗೂ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ ಎಂದರು.
ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಮೆರುಗನ್ನು ತಂದು ಕೊಟ್ಟಿದ್ದಾರೆ ಮುಂಬರುವ ದಿನಗಳಲ್ಲಿಯೂ ಸಹ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ತಾಪಂ ಇ ಒ ವಿ ಕೃಷ್ಣಪ್ಪ, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯನರಸಿಂಹ, ತಾ.ಪಂ. ಸಹಾಯಕ ನಿದೇರ್ಶಕ ಗೋವಿಂದೇಗೌಡ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿ ಮುನೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ಪ ರಾಮಮೂರ್ತಿ, ಕೊಮುಲ್ ನಿರ್ದೇಶಕ ಶ್ರೀನಿವಾಸ್, ತಾಲೂಕು ಪಂಚಾಯತ್ ಕಾರ್ಯಾಲಯದ ಸಿಬ್ಬಂದಿ ಅಭಿಲಾಷ್, ಶಬಿರ್, ರೋಹಿತ್ ನಾರಾಯಣ್, ಹಾಜರಿದ್ದರು.



























