Home ಕ್ರೈಂ ಸುದ್ದಿಗಳು ಪಡಿತರ ಅಕ್ಕಿ ಅಕ್ರಮ ದಂಧೆಗೆ ಆಹಾರ ಇಲಾಖೆಯ ಬಿಗಿ ಬಲೆ:ಮೂರು ಪ್ರತ್ಯೇಕ ಪ್ರಕರಣ ದಾಖಲು; 118.25...

ಪಡಿತರ ಅಕ್ಕಿ ಅಕ್ರಮ ದಂಧೆಗೆ ಆಹಾರ ಇಲಾಖೆಯ ಬಿಗಿ ಬಲೆ:ಮೂರು ಪ್ರತ್ಯೇಕ ಪ್ರಕರಣ ದಾಖಲು; 118.25 ಕ್ವಿಂಟಲ್ ಅಕ್ಕಿ, ಲಾರಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತು ಜಪ್ತಿ

ಯಾದಗಿರಿ:ಆ.3: ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಡಿತರ) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುತ್ತಿದ್ದವರ ವಿರುದ್ಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, 118.25 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಒಂದು ಸರಕು ವಾಹನವನ್ನು ಜಪ್ತಿ ಮಾಡಲಾಗಿದೆ.

ಶಹಾಪುರ ತಾಲೂಕಿನ ಉಕ್ಕಿನಾಳ ತಾಂಡಾ ಸಮೀಪ ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಗೋಗಿ ಪೆÇಲೀಸ್ ಸಿಬ್ಬಂದಿ ಖಾಸಗಿ ಗೋದಾಮಿನ ಮೇಲೆ ದಾಳಿ ನಡೆಸಿದರು. ಈ ವೇಳೆ ಚಾಮನಾಳ ತಾಂಡಾದ ಲೋಹಿತ್ ತಂದೆ ಕಿಷನ್ ರಾಠೋಡ್ ಅವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 81.75 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಯಿತು. ಸುಮಾರು ?1,89,544 ಮೌಲ್ಯದ ಅಕ್ಕಿಯನ್ನು ಜಪ್ತಿ ಮಾಡಿ ಗೋಗಿ ಪೆÇಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ-1955ರಡಿ ಪ್ರಕರಣ ಸಂಖ್ಯೆ 93/2026 ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಗುರುಮಿಠಕಲ್ ಪಟ್ಟಣದ ಮೋಮಿನಪೂರ ಪ್ರದೇಶದಲ್ಲಿರುವ ಧಾನ್ಯ ವ್ಯಾಪಾರಿ ಸೈಯದ್ ಮೊಹಿಯುದ್ದೀನ್ ಅವರ ಅಂಗಡಿಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು 6.50 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡರು. ಇದರ ಮೌಲ್ಯ ?15,080 ಎಂದು ಅಂದಾಜಿಸಲಾಗಿದ್ದು, ಗುರುಮಿಠಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 173/2026 ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವಡಗೇರಾ ತಾಲೂಕಿನ ಗಡಿ ಭಾಗದಲ್ಲಿ ಅಶೋಕ್ ಲೇಲ್ಯಾಂಡ್ ಸರಕು ವಾಹನ (ಕೆಎ-33-ಬಿ-2140) ಮೂಲಕ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ವಾಹನವನ್ನು ತಡೆದು ಪರಿಶೀಲಿಸಿದರು. ವಾಹನದಲ್ಲಿ 30 ಕ್ವಿಂಟಲ್ ಅಕ್ಕಿ ಪತ್ತೆಯಾಗಿದ್ದು, ಅಕ್ಕಿಯ ಮೌಲ್ಯ ?1,03,800 ಹಾಗೂ ವಾಹನದ ಮೌಲ್ಯ ?50,000 ಸೇರಿ ಒಟ್ಟು ?1,53,800 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಯಿತು. ಈ ಸಂಬಂಧ ವಡಗೇರಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 147/2026 ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಜಿಲ್ಲಾ ಉಪನಿರ್ದೇಶಕ ಸೋಮಶೇಖರ ಅವರ ನಿರ್ದೇಶನದಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಶಹಾಪುರ ತಾಲೂಕಿನ ಆಹಾರ ಶಿರಸ್ತೇದಾರ ಅಪ್ಪಯ್ಯ ಹಿರೇಮಠ, ಆಹಾರ ನಿರೀಕ್ಷಕರಾದ ಸಂಜೀವ ಕಾವಲಿ, ಬಸವರಾಜ ಬಡಿಗೇರ, ಗುರುಮಿಠಕಲ್ ತಾಲೂಕಿನ ಆಹಾರ ನಿರೀಕ್ಷಕ ಅನ್ವರ್ ಹಾಗೂ ವಡಗೇರಾ ತಾಲೂಕಿನ ಆಹಾರ ನಿರೀಕ್ಷಕ ನಹೀಮ್‍ಸಾಬ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಅಕ್ರಮ ಪಡಿತರ ಅಕ್ಕಿ ದಂಧೆ ವಿರುದ್ಧ ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.