
ಹುಮನಾಬಾದ್,ಅ.೨೫: ಪಟ್ಟಣದ ರಾಷ್ಟ್ರೀಯ ಹೆದ್ದಾರಿ-೬೫ರ ಬದಿಯಲ್ಲಿ ತುಳಜಾಪುರಕ್ಕೆ ಪಾದಯಾತ್ರೆ ಕೈಗೊಂಡ ಭಕ್ತರ ಅನುಕೂಲಕ್ಕಾಗಿ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮಕ್ಕೆ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರು ಚಾಲನೆ ನೀಡಿದರು.
ತುಳಜಾಪುರದ ಶ್ರೀ ತುಳಜಾಭವಾನಿ ದೇವಿಯ ದರ್ಶನಕ್ಕಾಗಿ ಪಾದಯಾತ್ರೆ ಮೂಲಕ ತೆರಳುತ್ತಿರುವ ಭಕ್ತರಿಗೆ ದಾರಿಮಧ್ಯೆ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅನ್ನದಾಸೋಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಾದಯಾತ್ರಿಗಳಿಗೆ ಅನ್ನದಾಸೋಹದ ಮೂಲಕ ಸೇವೆ ಸಲ್ಲಿಸುವುದು ಪುಣ್ಯದ ಕಾರ್ಯವಾಗಿದ್ದು, ಇಂತಹ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳು ಭಕ್ತರಲ್ಲಿ ಭಕ್ತಿ, ಸೇವಾ ಮನೋಭಾವ ಮತ್ತು ಪರಸ್ಪರ ಸಹಕಾರವನ್ನು ಬೆಳೆಸುತ್ತವೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ರಾಜಶೇಖರ ಚಿಂಚೋಳಿ ಸೇರಿದಂತೆ ಇತರ ಗಣ್ಯರು ಹಾಗೂ ಕಾರ್ಯಕ್ರಮದ ಆಯೋಜಕರು ಉಪಸ್ಥಿತರಿದ್ದರು.























