Home ಜಿಲ್ಲೆ ಶಿವಮೊಗ್ಗ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಶಿವಮೊಗ್ಗ, ಆ.೧೧-ಶಿವಮೊಗ್ಗ ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಆಗಸ್ಟ್ ೧೦ ರಂದು ಟ್ರಾಫಿಕ್ ಪೊಲೀಸರು, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಕುವೆಂಪು ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದರು.


ಟ್ರಾಫಿಕ್ ಇನ್ಸ್’ಪೆಕ್ಟರ್ ದೇವರಾಜ್, ಸಬ್ ಇನ್ಸ್’ಪೆಕ್ಟರ್ ಸ್ವಪ್ನಾ ಸೇರಿದಂತೆ ಪಾಲಿಕೆ ಅಧಿಕಾರಿ ಸಿಬ್ಬಂದಿಗಳು ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.


ದಟ್ಟಣೆ : ಪ್ರವಾಸಿ ಮಂದಿರ ಸರ್ಕಲ್ ಸಮೀಪದಿಂದ ಶಿವಮೂರ್ತಿ ಸರ್ಕಲ್ ವರೆಗಿನ ಕುವೆಂಪು ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸದರಿ ರಸ್ತೆಯ ಅಭಿವೃದ್ದಿ ಕಾಮಗಾರಿಯ ನಂತರ, ಟ್ರಾಫಿಕ್ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ.


ಈ ನಡುವೆ ರಸ್ತೆಯ ಇಕ್ಕೆಲಗಳ ಫುಟ್ಪಾತ್ ಒತ್ತುವರಿಯಾಗಿತ್ತು. ವ್ಯಾಪಾರ ವಹಿವಾಟು ಮಾತ್ರವಲ್ಲದೆ ವಾಹನಗಳ ನಿಲುಗಡೆ ಮಾಡಲಾಗುತ್ತಿತ್ತು. ಇದರಿಂದ ವಾಹನ ಸಂಚಾರ ಮಾತ್ರವಲ್ಲದೆ, ಪಾದಚಾರಿಗಳ ಓಡಾಟವು ದುಸ್ತರವಾಗಿ ಪರಿಣಮಿಸಿತ್ತು.


ಇದೀಗ ಟ್ರಾಫಿಕ್ ಇನ್ಸ್’ಪೆಕ್ಟರ್ ದೇವರಾಜ್ ಅವರು ಕುವೆಂಪು ರಸ್ತೆಯಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ಇದು ಸ್ವಾಗತಾರ್ಹ ಸಂಗತಿಯಾಗಿದೆ ಎಂದು ನಾಗರಿಕರು ಅಭಿಪ್ರಾಯಪಡುತ್ತಾರೆ.