Home ಕ್ರೈಂ ಸುದ್ದಿಗಳು ಜಮಖಂಡಿ ನಗರದಲ್ಲಿ ಅರಣ್ಯಕ್ಕೆ ಬೆಂಕಿ; 5 ಏಕರೆ ಪ್ರದೇಶ ಭಸ್ಮ

ಜಮಖಂಡಿ ನಗರದಲ್ಲಿ ಅರಣ್ಯಕ್ಕೆ ಬೆಂಕಿ; 5 ಏಕರೆ ಪ್ರದೇಶ ಭಸ್ಮ

ಜಮಖಂಡಿ: ಏ.9: ನಗರದ ಅಡಗಲ ಪೀರ ದರ್ಗಾ ಹತ್ತಿರದ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಸುಮಾರು 5 ಏಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಘಟನೆಯ ಮಾಹಿತಿ ತಿಳಿದು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಹಲವಾರು ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅವಘಡದಿಂದ ಸುಮಾರು 5 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದ್ದು, ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.