
ಕೋಲಾರ,ಜು.೩೦- ಮಾಜಿ ಸಚಿವ ದಿವಂಗತ ಸಿ. ಬೈರೇಗೌಡ ಅವರ ಪುಣ್ಯಸ್ಮರಣೆ ಅಂಗವಾಗಿ ಗರುಡಪಾಳ್ಯದಲ್ಲಿರುವ ಅವರ ಸಮಾಧಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಭೇಟಿ ನೀಡಿ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ್, ಸಿ. ಬೈರೇಗೌಡ ಅವರು ಜನಪರ ನಾಯಕತ್ವ, ಸರಳತೆ ಹಾಗೂ ಅಭಿವೃದ್ಧಿ ಪರ ಚಿಂತನೆಯ ಮೂಲಕ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಅವರ ಆದರ್ಶಗಳು ಇಂದಿನ ಜನಪ್ರತಿನಿಧಿಗಳಿಗೆ ಮಾರ್ಗದರ್ಶಕವಾಗಿವೆ. ಅವರು ಹಾಕಿಕೊಟ್ಟ ಅಭಿವೃದ್ಧಿಯ ಹಾದಿಯಲ್ಲಿ ಸಾಗುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು
ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಸಿ.ಬಿ ಕೃಷ್ಣಬೈರೇಗೌಡ, ಮಾಜಿ ಸಚಿವ ಎಂ.ಸಿ ಸುಧಾಕರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಳಿಕುಂಟೆಮಠ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.


































