Home ಜಿಲ್ಲೆ ಕಲಬುರಗಿ ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ್ ಕಡೆಗಣನೆ ಸಲ್ಲದು ; ಪ್ರಿಯಾಂಕ್ ಭಟ್ ಪೂಜಾರಿ

ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ್ ಕಡೆಗಣನೆ ಸಲ್ಲದು ; ಪ್ರಿಯಾಂಕ್ ಭಟ್ ಪೂಜಾರಿ

ಅಫಜಲಪುರ ; ಫೆ.14:ಮಾಜಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಮಾಲಿಕಯ್ಯ ಗುತ್ತೇದಾರ್ ಅವರನ್ನು ಸರ್ಕಾರದ ಕಾರ್ಯಕ್ರಮದಲ್ಲಿ ಆಹ್ವಾನಿಸದಿರುವುದು ಸಹಿಸುವುದಿಲ್ಲ ಎಂದು ಪ್ರಿಯಾಂಕ್ ಭಟ್ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ದೇ. ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೌಜನ್ಯಕ್ಕೂ ಈ ಭಾಗದ ಹಿರಿಯ ರಾಜಕಾರಣಿ ಮತ್ತು ಅಫಜಲಪುರ ತಾಲ್ಲೂಕು ಹಸಿರು ಕ್ರಾಂತಿಯಾಗಲು ಪ್ರಮುಖ ಪಾತ್ರ ವಹಿಸಿರುವ ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಕಡೆಗಣಿಸಿದ್ಧು ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಮಾಜಿ ಸಚಿವರನ್ನು ಪದೇ, ಪದೇ ಕಡೆಗಣಿಸುತ್ತಿರುವುದು ಸರಿಯಲ್ಲ. ಈ ಕೂಡಲೇ ಕಾಂಗ್ರೆಸ್ ಪಕ್ಷದ ವರಿಷ್ಠರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ತಾಲ್ಲೂಕಿನ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರಿಯಾಂಕ್ ಪೂಜಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಖ್ಯಾತ ಪೂಜಾರಿ, ಪ್ರಫುಲ್ ಪೂಜಾರಿ, ಶ್ರೀಪಾದ ಮಾಳಗೆ, ಬಲವಂತ ಜಕಬಾ, ಶೇಕ ಅಲಿ ತಾಂಬೋಲಿ, ಕಾಶಿನಾಥ ಭಟ್ಟರಗಿ, ಭಾಗಪ್ಪ ವಡಗೇರಿ, ರಾಮಣ್ಣ ಕರಚಿ, ಕರುಣಾಕರ ಪೂಜಾರಿ, ರುದ್ರಯ್ಯ ಸ್ವಾಮಿ ಉಪಸ್ಥಿತರಿದ್ದರು.