ಜಮಖಂಡಿ:ಡಿ.03:ಸಿದ್ದಾಪುರ ಗ್ರಾಮದಲ್ಲಿ ಭೀಕರ ಅಪಘಾತ ದಿಂದ ನಾಲ್ಕು ಜನ ಯುವಕರು ಸಾವು ಸ್ಥಳಕ್ಕೆ ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು
ಮೃತ ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿದ ಅವರು ಕಬ್ಬಿನ ಸೀಸನ್ ಪ್ರಾರಂಭವಾಗಿದ್ದು,ಸಾರ್ವಜನಿಕರು ಹಾಗೂ ವಾಹನ ಸವಾರರು ಜಾಗರುಕತೆಯಿಂದ ಪ್ರಯಣಿಸಲು ಮನವಿ ಮಾಡಿ ಮುನ್ನೆಚ್ಚರಿಕೆ ವಹಿಸುವುದು ತುಂಬ ಅಗತ್ಯ. ಇಲ್ಲದಿದ್ದರೆ ಇಂತಹ ಅವಘಡಗಳಿಂದ ಕುಟುಂಬ ನಷ್ಟಕ್ಕೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದರು.























