Home ಜಿಲ್ಲೆ ಬೆಂಗಳೂರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು,ಜು.18- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.


ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.


1954ರ ಮೇ 25ರಲ್ಲಿ H.D.ದೇವೇಗೌಡರನ್ನು ಮದುವೆಯಾಗಿದ್ದ ಚೆನ್ನಮ್ಮ ಉಸಿರಾಟದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿ ದ್ದರಿಂದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚೆನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.


2001ರ ಫೆಬ್ರವರಿ ತಿಂಗಳಲ್ಲಿ ಚೆನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚೆನ್ನಮ್ಮ, ಅಂದಿನ ಕಾಲದಲ್ಲೇ ಎಸ್ ಎಸ್ ಎಲ್ ಸಿ ವರೆಗೆ ಶಿಕ್ಷಣ ಪೂರೈಸಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು.