
ಅಥಣಿ: ಕೆಎಲ್ಇ ಸಂಸ್ಥೆಯ ಸ್ಥಳೀಯ ಎಸ್ ಎಸ್ ಎಂಎಸ್ ಮಹಾವಿದ್ಯಾಲಯದ ಐಕ್ಯೂಎಸಿ ಉಪಕ್ರಮದಡಿ ವಿಜ್ಞಾನ ವಿಭಾಗಗಳ ಸಹಯೋಗದಲ್ಲಿ “ಯುವ ಮನಸ್ಸುಗಳು – ಮಹತ್ವದ ಆಲೋಚನೆಗಳು: ಮೂಲಭೂತ ಮತ್ತು ಅನ್ವಯಿಕ ವಿಜ್ಞಾನಗಳ ಅನ್ವೇಷಣೆ” ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ವಿದ್ಯಾರ್ಥಿಗಳ ವಿಚಾರ ಸಂಕೀರ್ಣ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಲೋಕೇಶ್ ಎ. ಶಾಸ್ತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮೂಲಭೂತ ಹಾಗೂ ಅನ್ವಯಿಕ ವಿಜ್ಞಾನಗಳ ಮಹತ್ವ, ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಅಗತ್ಯ ಮತ್ತು ಸಂಶೋಧನಾ ಮನೋಭಾವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅಧ್ಯಕ್ಷತೆಯನ್ನು ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಂಜಿ ವಹಿಸಿ ಮಾತನಾಡಿದರು. ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ಪ್ರಶಾಂತ ಮಗದುಮ್ಮ ಹಾಗೂ ಐಕ್ಯೂಎಸಿ ಸಂಯೋಜಕ ಇಮ್ರಾನ್ ಮುಲ್ಲಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಚಾಲಕ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಧೀರೇಂದ್ರ ವಾದಿರಾಜ್ ಕಾರ್ಯ ನಿರ್ವಹಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಸಂಗಮೇಶ ಎನ್. ತಳವಾರ ಹಾಗೂ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಯಣ್ಣ ಎನ್. ಡಿ. ಸಂಘಟನಾ ಕಾರ್ಯದರ್ಶಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ರಾಜ್ಯದ ವಿವಿಧ ಮಹಾವಿದ್ಯಾಲಯದಿಂದ ೧೯೪ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಕಂಪ್ಯೂಟರ್ ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಮಹಾವಿದ್ಯಾಲಯದ ಬೋಧಕ ಸಿಬ್ಬಂದಿಗಳು ವಿಚಾರ ಸಂಕೀರ್ಣದಲ್ಲಿ ಭಾಗವಹಿಸಿದರು.





























