
ಬಾಗಲಕೋಟೆ:ಮಾ.15:
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಖಚಿರಿiv ಉಚಿಟಿಜhi Uಟಿiveಡಿsiಣಥಿ oಜಿ ಊeಚಿಟಣh Sಛಿieಟಿಛಿes ಸಹಯೋಗದಲ್ಲಿ ಆಯೋಜಿಸಿದ್ದ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಭಾನುವಾರ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಸಚಿವರಾದ ಊ. ಏ. ಪಾಟೀಲ, ಶರಣಪ್ರಕಾಶ ಪಾಟೀಲ ಹಾಗೂ ಉಸ್ತುವಾರಿ ಸಚಿವರಾದ ಖ. ಃ. ತಿಮ್ಮಾಪುರ ಭಾಗವಹಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಇದೇ ವೇಳೆ ಕೃಷ್ಣಾ ಮೇಲ್ದಂಡೆ ಯೋಜನೆ-3ರ ಭೂಸ್ವಾಧೀನಗೊಂಡ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಯ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಇದು ಸಮಾಜದ ಋಣವನ್ನು ತೀರಿಸುವ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನರು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬೆಂಬಲ ನೀಡಿ ಸರ್ಕಾರ ರಚಿಸಲು ಅವಕಾಶ ನೀಡಿದ್ದು, ಆ ಋಣವನ್ನು ತೀರಿಸುವ ಸಂಕಲ್ಪದೊಂದಿಗೆ ಶಾಶ್ವತ ಪರಿಹಾರ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
ಯುಕೆಪಿ ಮೂರನೇ ಹಂತದ ಯೋಜನೆಗೆ ಸುಮಾರು 15 ವರ್ಷಗಳ ಹಿಂದೆ ನ್ಯಾಯಾಲಯದಿಂದ ಆದೇಶ ಬಂದಿದ್ದರೂ ಕೇಂದ್ರ ಸರ್ಕಾರದಿಂದ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ. ಭೂಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಬಾಗಲಕೋಟೆ, ವಿಜಯಪುರ ಹಾಗೂ ಕಲಬುರಗಿ ಭಾಗದ ಜನರು ಒತ್ತಾಯ ವ್ಯಕ್ತಪಡಿಸಿದ್ದರು. ಅದರ ಹಿನ್ನೆಲೆಯಲ್ಲಿ ಸುಮಾರು 1,33,000 ಎಕರೆ ಭೂಮಿಗೆ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದ್ದು, ಮೊದಲ ಹಂತದಲ್ಲಿ ಚೆಕ್ ವಿತರಣೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಈ ಯೋಜನೆಗೆ ಸಂಬಂಧಿಸಿ ಕೆಲ ರಾಜ್ಯಗಳಿಂದ ವಿರೋಧ ವ್ಯಕ್ತವಾಗಿದ್ದರೂ “ನಮ್ಮ ನೀರು, ನಮ್ಮ ಭೂಮಿ, ನಮ್ಮ ಹಕ್ಕು” ಎಂಬ ನಿಲುವಿನೊಂದಿಗೆ ಸರ್ಕಾರ ಮುಂದುವರಿದಿದೆ. ಈ ವರ್ಷವೇ ಸುಮಾರು 3 ಸಾವಿರ ಕೋಟಿ ರೂಪಾಯಿ ಪರಿಹಾರ ವಿತರಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಬಡವರಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಖಾಸಗಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಹೇಳಿದರು.
ಈ ಅಭಿವೃದ್ಧಿ ಯೋಜನೆಗಳು ಜಿಲ್ಲೆಯ ಜನತೆಗೆ ದೀರ್ಘಕಾಲಿಕ ಪ್ರಯೋಜನ ನೀಡಲಿದ್ದು, ಜಿಲ್ಲೆಯ ಶಾಸಕರ ಪರಿಶ್ರಮ ಹಾಗೂ ಹೋರಾಟದಿಂದ ಇವು ಸಾಕಾರವಾಗುತ್ತಿವೆ ಎಂದು ಅವರು ಹೇಳಿದರು.
ಶಿವನಾಂದ ಪಾಟೀಲ್, ಶಾಸಕ ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ್, ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯನಮಠ,ಮಾಜಿ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.



























