ಇಂಗಳಗಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ವಾಡಿ:ನ.13: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ವಾಡಿ ಠಾಣಾಧಿಕಾರಿ ಕೆ.ತಿರುಮಲೇಶ, ಕಲೆ ಸಾಹಿತ್ಯ ಸಂಗೀತ ನೃತ್ಯ ಗಾಯನ ಇವು ಕಲಾಪ್ರಕಾರಗಳಾಗಿದ್ದು, ಪ್ರತಿಯೊಬ್ಬರನ್ನೂ ಆಕರ್ಷಿಸುತ್ತವೆ. ಆದರೆ ಕೆಲವರಲ್ಲಿ ಈ ಮಾತ್ರ ಕಲಾ ಪ್ರತಿಭೆ ಮೈಗೂಡಿರುತ್ತದೆ. ಸರಕಾರ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿರುವುದು ಉತ್ತಮ ಕಾರ್ಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳ ಜೀವನ ಸುಂದರವಾಗಿರಲಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಅನಿತಾ ಮಲ್ಲಪ್ಪ ನಾಟೀಕಾರ ಕಾರ್ಯಕ್ರಮ ಉದ್ಘಾಟಿಸಿದರು. ಪತ್ರಕರ್ತ ಸಾಯಬಣ್ಣ ಗುಡುಬಾ ಮಕ್ಕಳ ಶೈಕ್ಷಣಿಕ ಜೀವನದ ಕುರಿತು ಮಾತನಾಡಿದರು. ಮುಖ್ಯಶಿಕ್ಷಕಿ ಸರಸ್ವತಿ ಮುನಗಲ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ, ಸಿ ಆರ್ ಪಿ ಅಂಬಾದಾಸ್, ಗ್ರಾಪಂ ಉಪಾಧ್ಯಕ್ಷೆ ದ್ರೌಪದಿ ಶಾಂತಪ್ಪ, ಮಲ್ಲಾರಾವ ಕುಲಕರ್ಣಿ, ಬಸವರಾಜ ಸ್ಥಾವರಮಠ, ಶರಣು ರಾವೂರ, ಮಹ್ಮದ್ ಗೌಸ್ ದುದ್ದನಿ, ಕಾಶಿನಾಥ್ ಚನ್ನಗುಂಡ, ಮಹೇಶ ಕುಮಾರ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಛತ್ರು ರಾಥೋಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶರಣಪ್ಪ ಐಕೂರ ಸೇರಿದಂತೆ ಗ್ರಾಮದ ಮುಖಂಡರು, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಸಂಗಡಿಗರು ಪ್ರಾರ್ಥಿಸಿದರು. ಶ್ರೇಯಾ ಹಾಗೂ ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಶಿಕ್ಷಕ ಬಸಪ್ಪ ಮುಗುಳುಕೋಡ ಕಾರ್ಯಕ್ರಮ ನಿರೂಪಿಸಿದರು. ರೇವಣಸಿದ್ದಯ್ಯ ಸ್ವಾಮಿ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ವಿಜೇತ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು.