
ಕೆ.ಆರ್.ಪುರ,ಜು.೧೪- ಮಹದೇವಪುರ ಕ್ಷೇತ್ರದ ಕಾವೇರಿ ನಗರದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ನಲ್ಲೂರಹಳ್ಳಿ ಟಿ.ನಾಗೇಶ್ ಅವರು ಸಿ.ವಿ ರಾಮನ್ ನಗರ ಸಾರ್ವಜನಿಕ ಆಸ್ಪತ್ರೆಯ ಸಹಯೋಗದೊಂದಿಗೆ, ಉಚಿತ ಆರೋಗ್ಯ ತಪಾಸಣಾ ಹಾಗೂ ವೈದ್ಯಕೀಯ ಚಿಕಿತ್ಸಾ ಶಿಬಿರ ನಡೆಸಿದರು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಟಿ ಶ್ರೀನಿವಾಸ್ ಅವರು ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಸೂಕ್ತ ಚಿಕಿತ್ಸೆ ಪಡೆದು ನಿಶ್ಚಿಂತೆಯಿಂದ ಬದುಕು ಸಾಗಿಸಬಹುದು ಎಂದು ಕಿವಿಮಾತು ಹೇಳಿದರು.
ಮಹದೇವಪುರ ಕ್ಷೇತ್ರದ ಕಾವೇರಿ ನಗರದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ನಲ್ಲೂರಹಳ್ಳಿ ಟಿ.ನಾಗೇಶ್ ಅವರು ಸಿ.ವಿ ರಾಮನ್ ನಗರ ಸಾರ್ವಜನಿಕ ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಧುನಿಕ ಬದುಕಿನ ಕೆಲಸ ಕಾರ್ಯಗಳ ಒತ್ತಡದಲ್ಲಿ ನಮಗರಿವಿಲ್ಲದೆಯೇ ಅನೇಕ ರೋಗಗಳು ನಮ್ಮ ದೇಹವನ್ನು ಸೇರಿಕೊಳ್ಳುತ್ತವೆ. ನಮ್ಮ ದೇಹ ದೈವದತ್ತವಾಗಿ ಬಂದಿದೆ. ಅಂತಹ ದೇಹವನ್ನು ಸರಿಯಾದ ಕ್ರಮದಲ್ಲಿ ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ದೇಹದಲ್ಲಿರುವ ಏರು ಪೇರುಗಳನ್ನು ಸರಿಪಡಿಸಿಕೊಂಡರೆ ಸುಂದರವಾದ, ಆರೋಗ್ಯ ಪೂರ್ಣವಾದ ಬದುಕನ್ನು ಸಾಗಿಸಬಹುದು ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ಜಿಲ್ಲಾ ಅಧ್ಯಕ್ಷ ಮೋಹನ್ ಬಾಬು ,ಮಾಜಿ ಪಾಲಿಕೆ ಸದಸ್ಯ ಉದಯಕುಮಾರ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ,ಹೂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಾಂಕ್ ಬಾಬು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬ್ರಿಜೇಶ್ ಯಾದವ್, ಮುಖಂಡರಾದ , ಅನಿಲ್ ರೆಡ್ಡಿ, ಚೇತನ ರೆಡ್ಡಿ,ಎ.ಯಲ್ಲಪ್ಪ, ಅನಿಲ್ ಗೌಡ, ಗೋವಿಂದ ರಾಜ್, ನಾಗರಾಜ್ ಮತ್ತಿತರರು ಹಾಜರಿದ್ದರು.
































