ಚರ್ಚೆ ನಂತರ ಬೇಡಿಕೆಗಳ ಈಡೇರಿಕೆ

ಹುಬ್ಬಳ್ಳಿ,ಆ2: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ , ಸಾರಿಗೆ ಸಚಿವ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಭರವಸೆ ನೀಡಿದರು.


ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಕ್ರಿಯಾ ಸಮಿತಿ ಸಂಘಟನೆಗಳ ಪ್ರಮುಖರ ಮನವಿ ಸ್ವೀಕಾರ ಮಾಡಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಾರಿಗೆ ನೌಕರರ ಸಂಘದ ಆರ್.ಎಫ್. ಕವಳಿಕಾಯಿ ಮುಂತಾದವರು ಇದ್ದರು.