
ತುಮಕೂರು, ಅ. ೨೬- ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಗಂಗಾಧರ್ಎ೦.ಎಲ್ ಅವರಿಗೆ ಶ್ರಿ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಸಾಹೇ) ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಸಂದಿದೆ.
ಗಂಗಾಧರ್ ಎ೦.ಎಲ್ ಅವರು ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಬಯೋ ಮೆಡಿಕಲ್ ಇಂಜಿನಿಯರಿoಗ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಪ್ರೊ. ರಾಜು.ಎ.ಎಸ್., ಅವರ ಮಾರ್ಗದರ್ಶನದಲ್ಲಿ “ಬಯೋಮೆಟ್ರಿಕ್ ಹೈಬ್ರಿಡ್ ತಂತ್ರಗಳನ್ನು ಬಳಸಿಕೊಂಡು ಭಾಗಶಃ ಮುಚ್ಚಲ್ಪಟ್ಟ ೩ಡಿ ಆಯಾಮಗಳ ಗುರುತಿಸುವಿಕೆ” ವಿಷಯ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಲಭಿಸಿದೆ.
ಗಂಗಾಧರ್ ಎಂ.ಎಲ್. ಅವರು ಶ್ರೀ ಸಿದ್ಧಾರ್ಥ ಇಂಜಿನಿಯರಿ೦ಗ್ ಸೇರಿದಂತೆ ರಾಜ್ಯದ ಇತರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಳೆದ ೧೩ ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಮತ್ತು ಅಂತಾರಾಷ್ಟೀಯ ಮಟ್ಟದಲ್ಲಿ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ, ಪ್ರಬಂಧಗಳನ್ನು ಪ್ರಸ್ತುತಪಡಿಸಿದ್ದಾರೆ.
ಸಾಹೇ ವಿವಿಯಿಂದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ. ಅಶೋಕ ಮೆಹ್ತಾ, ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಪರೀಕ್ಷಾಂಗ ನಿಯಂತ್ರಕರಾದ ಡಾ. ಸುನಿಲ್ ಕೆ, ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಾಡಕಟ್ಟಿ ಸೇರಿದಂತೆ ಸಾಹೇ ವಿವಿಯ ಅಂಗ ಸಂಸ್ಥೆಗಳ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಂಶೋಧಕ ಗಂಗಾಧರ್ ಎಂ.ಎಲ್ ಅವರನ್ನು ಅಭಿನಂದಿಸಿದ್ದಾರೆ.





















