Home ಜಿಲ್ಲೆ ಕಲಬುರಗಿ ಅನಿಲ ಸೋರಿಕೆ ದುರಂತ: ಮೃತರ ಕುಟುಂಬಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ

ಅನಿಲ ಸೋರಿಕೆ ದುರಂತ: ಮೃತರ ಕುಟುಂಬಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ

ಬೆಂಗಳೂರು,ಆ.6-ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರೀಸ್ (CIL Laboratories) ಘಟಕದಲ್ಲಿ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ (SO2) ಅನಿಲ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವುದು ಹಾಗೂ ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಚಿವರು ತಮ್ಮ ತೀವ್ರ ಸಾಂತ್ವನವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.
ಘಟನೆ ನಡೆದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಲಾಗಿದೆ. ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿವೆ ಎಂದು ಸಚಿವರು ತಿಳಿಸಿದ್ದಾರೆ.
ಅನಿಲ ಸೋರಿಕೆಗೆ ನಿಖರ ಕಾರಣವನ್ನು ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯವಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕೈಗಾರಿಕಾ ಘಟಕಗಳಲ್ಲಿ ಸುರಕ್ಷತಾ ಮಾನದಂಡಗಳ ಅನುಷ್ಠಾನದ ಕುರಿತು ಅಗತ್ಯ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಅನಿಲ ಸೋರಿಕೆಗೆ ನಿಖರ ಕಾರಣವನ್ನು ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯವಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕೈಗಾರಿಕಾ ಘಟಕಗಳಲ್ಲಿ ಸುರಕ್ಷತಾ. ಮೃತರ ಕುಟುಂಬಗಳಿಗೆ ಕಾನೂನು ಪ್ರಕಾರ ದೊರೆಯಬೇಕಾದ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಂಪನಿಯು ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಕಾರ್ಮಿಕರ ಹಕ್ಕುಗಳಿಗೆ ಅನುಗುಣವಾಗಿ ಇಎಸ್‍ಐಸಿ ಹಾಗೂ ಕಾರ್ಖಾನೆಗಳ ಕಾಯ್ದೆಯಡಿ ದೊರೆಯಬೇಕಾದ ಇತರೆ ಪರಿಹಾರಗಳನ್ನೂ ವಿಳಂಬವಿಲ್ಲದೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.