Home ಜಿಲ್ಲೆ ಕಲಬುರಗಿ ಕಂಬಳೇಶ್ವರ ಮಠಕ್ಕೆ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಭೇಟಿ

ಕಂಬಳೇಶ್ವರ ಮಠಕ್ಕೆ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಭೇಟಿ

ಚಿತ್ತಾಪುರ;ಫೆ.24: ಪಟ್ಟಣದ ಕಂಬಳೇಶ್ವರ ಮಠಕ್ಕೆ ಕೊಪ್ಪಳದ ಗವಿ ಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಭೇಟಿ ನೀಡಿ ಕಂಬಳೇಶ್ವರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಇದೇ ವೆಳೆ ಮಹಿಳೆಯರು, ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಜಿಲ್ಲೆ ಹಾಗೂ ವಿವಿಧ ತಾಲೂಕಿನಿಂದ ಆಗಮಿಸಿದ ಭಕ್ತರು ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಬಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಿದರು.ಈ ಸಂದರ್ಭದಲ್ಲಿ ರಾಜಕೀಯ ಗಣ್ಯರು, ಅನೇಕ ಮುಖಂಡರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.