Home ಮುಖಪುಟ ಸುದ್ದಿ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ

ಮೈಸೂರು: ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಇಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದರು.

ಆಶ್ರಮದ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಆಶ್ರಮದ ಆವರಣದಲ್ಲಿರುವ ಪ್ರಸಿದ್ಧ ಶುಕವನಕ್ಕೆ ಭೇಟಿ ನೀಡಿ ವಿವಿಧ ಪ್ರಭೇದದ ಪಕ್ಷಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು.