ಕಲಬುರಗಿ,ಸೆ.26-ಅಪರಿಚಿತ ವಾಹನ ಡಿಕ್ಕಿ ಹೊಡೆದು 13-15 ವರ್ಷ ವಯಸ್ಸಿನ ಅಪರಿಚಿತ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-50ರ ಉಪಳಾಂವ ಸೀಮಾಂತರದ ಸಾತಪೀರ ದರ್ಗಾ ಹತ್ತಿರ ನಡೆದಿದೆ.
ಮೃತ ಬಾಲಕಿ 4.10 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾಳೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.























