
ಕರಜಗಿ:ಜೂ.7:ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೋಲಿ ಸಮಾಜದ ಧೀಮಂತ ನಾಯಕರಾಗಿರುವ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಅವರಿಗೆ ಮುಂಬರುವ ಸಚಿವ ಸಂಪುಟ ಪುನರಚನೆಯಲ್ಲಿ ಅವಕಾಶ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಪಂ ಮಾಜಿ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಮನವಿ ಮಾಡಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರದಂದು ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಅವರ 72ನೇ ಜನ್ಮದಿನದ ಅಂಗವಾಗಿ ಬಡರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ನಡೆಸಿ ಮಾತನಾಡಿದ ಅವರು,ಕೋಲಿ ಸಮಾಜಕ್ಕೆ ಎಸ್.ಟಿಗೆ ಸೇರ್ಪಡೆ ಮಾಡಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಾ, ಈ ಭಾಗದಲ್ಲಿ ಕೋಲಿ ಸಮಾಜವನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿರುವ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿದರೆ ಇಡೀ ಕೋಲಿ ಸಮಾಜಕ್ಕೆ ಆದ್ಯತೆ ನೀಡಿದಂತಾಗುತ್ತದೆ.ಕಾಂಗ್ರೆಸ್ ಪಕ್ಷಕ್ಕೆ ಕೋಲಿ ಸಮಾಜವು ಯಾವತ್ತೂ ಸಹ ಬೆನ್ನೆಲುಬಾಗಿ ನಿಂತಿದೆ.ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಕಲ್ಪಿಸುವ ಕೆಲಸ ಮಾಡಿದ್ದಾರೆ.ವಿಶೇಷವಾಗಿ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸ್ಮಶಾನ ಭೂಮಿಯ ಕಂಪೌಂಡ್ ನಿರ್ಮಾಣಕ್ಕೆ ಕೇಳಿಕೊಂಡಾಗ ತಕ್ಷಣವೇ ಅದಕ್ಕೆ ಅನುದಾನ ಬಿಡುಗಡೆ ಮಾಡಿಸಿದ್ದಾರೆ.ಅಲ್ಲದೇ ತಮ್ಮ ಸ್ವಂತ ದುಡ್ಡಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಗಳು, ಹಿಂದುಳಿದ ವರ್ಗಗಳ ಸಮಾವೇಶ ಹೇಗೆ ಅನೇಕ ಕೆಲಸಗಳು ಮಾಡಿದ್ದಾರೆ.ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಪಕ್ಷ ಸಂಘಟನೆ ಮಾಡಿರುವ ಇವರನ್ನು ಕಾಂಗ್ರೆಸ್ ಪಕ್ಷ ಸಚಿವ ಸ್ಥಾನ ನೀಡಿವ ಮೂಲಕ ನ್ಯಾಯ ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಡಾ.ವಿನಾಯಕ್ ಜೋಶಿ,ರಮೇಶ ಕ್ಷತ್ರಿಯ, ಶರಣಪ್ಪ ನಾಯಕೋಡಿ, ಭೀಮಾಶಂಕರ ವಡ್ಡರ,ಹಣಮಂತ ವಾಂಗಿ, ಪರಶುರಾಮ ಡಾಳೆ,ಸೈಬಣ್ಣ ಜಮಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಕೋಲಿ ಸಮಾಜದ ಆಸ್ತಿಯಾಗಿದ್ದಾರೆ.72ನೇ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು ಅವರಿಗೆ ಕೊಡುಗೆಯಾಗಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ಕೋಲಿ ಸಮಾಜವು ಸಂಪೂರ್ಣ ಬೆಂಬಲ ನೀಡಿದೆ.ಹೀಗಾಗಿ ಸಚಿವ ಅವರಿಗೆ ಅವಕಾಶ ನೀಡಬೇಕು.
-ಭೀಮಾಶಂಕರ ಹೊನ್ನಕೇರಿ, ತಾಪಂ ಮಾಜಿ ಉಪಾಧ್ಯಕ್ಷರು ಅಫಜಲಪುರ.