ಮಾನಸಿಕ ಆರೋಗ್ಯಕ್ಕೆ ಮಹತ್ವ ಕೊಡಿ

ಬೀದರ್: ಅ.20:ಮಾನಸಿಕ ಆರೋಗ್ಯಕ್ಕೆ ದೈಹಿಕ ಆರೋಗ್ಯದಷ್ಟೇ ಮಹತ್ವ ಕೊಡಬೇಕು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ. ಕಿರಣ ಪಾಟೀ¯ ಹೇಳಿದರು.
ನಗರದ ನೌಬಾದನ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ವ್ಯಕ್ತಿಯ ದೈಹಿಕ ಸ್ವಾಸ್ಥ್ಯ ಉತ್ತಮವಾಗಿರಲು ಸಾಧ್ಯ ಎಂದು ತಿಳಿಸಿದರು.
ಡಾ. ಅಮಲ್ ಷರೀಫ್, ಡಾ. ಮಲ್ಲಿಕಾರ್ಜುನ ಎಸ್. ಗುಡ್ಡೆ ಮಾತನಾಡಿದರು. ಪ್ರಾಚಾರ್ಯ ಡಾ. ರೂಪೇಶ್ ಎಂ. ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.