ಸಂಜೆವಾಣಿ ವಾರ್ತ
ಹುಮನಾಬಾದ್ : ಸೆ.೨೭: ಗ್ರಾಮಗಳಲ್ಲಿ ಸ್ವಚ್ಛತೆ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾರಣಾಧಿಕಾರಿ ಡಾ. ಗಿರೀಶ್ ಬದೋಲೆ ಪಟ್ಟಣದ ತಾಲೂಕ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಹೀ ಸೇವಾ ಕಾರ್ಯಕ್ರಮ ಹಾಗೂ ಜಾಧ ಸ್ವಚ್ಛತಾ ಕಾರ್ಮಿಕರಿಗೆ ಸ್ವಚ್ಛತಾ ಸಮವಸ್ತ್ರವನ್ನು ವಿತರಿಸಿ ಮಾತನಾಡುತ್ತ ತಿಳಿಸಿದರು
ಸಪ್ಟೆಂಬರ್ ೧೭ರಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಹಸ್ತದಿಂದ ಸ್ವಚ್ಛತಾ ಈ ಕಾರ್ಯಕ್ರಮ ಉದ್ಘಾಟಿಸಲಾಯಿತು . ನಿರಂತರವಾಗಿ ಪ್ರತಿ ಗ್ರಾಮಗಳಲ್ಲಿ ಸ್ವಚ್ಛತಾ ಈ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಒಡಮೂಡಿಸಲಾಗುತ್ತದೆ ಎಂದರು.
ಬೀದರ್ ಜಿಲ್ಲೆ ಕಸಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲೆಯ ಗ್ರಾಮ ಪಂಚಾಯತ್ ಅವರ ಸಹಕಾರ ಅಗತ್ಯವಾಗಿದೆ ಎಂದು ಸಿಇಓ ಡಾ. ಗಿರೀಶ್ ಬದೋಲೆ ಪಟ್ಟಣದ ಸ್ವಚ್ಛತಾ ಈ ಕಾರ್ಯಕ್ರಮದಲ್ಲಿ ಮಾತನಾಡುತ್ತ ಗ್ರಾಮ ಪಂಚಾಯತ್ ಅವರಿಗೆ ಕರೆ ನೀಡಿದರು
ಈ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಕಲೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ವಿವಿಧ ಮಾದರಿಗಳನ್ನು ವಸ್ತು ಪ್ರದೇಶದಲ್ಲಿ ಇಟ್ಟಿದ್ದರು ವಿವಿಧ ಮಾದರಿಗಳನ್ನು ಸಿಇಓ ವೀಕ್ಷಿಸಿ ಮೆಚ್ಚಿಗೆ ವ್ಯಕ್ತಪಡಿಸಿದರು. ಪ್ರಥಮ ದ್ವಿತೀಯ ತೃತೀಯ ಬಹುಮಾನ ವಿತರಿಸಿದರು
ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೀಪಿಕಾ ನಾಯಕ್ ಮಾತನಾಡಿ ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಕಲೆ ವಸ್ತು ಪ್ರದರ್ಶನ ಹಮ್ಮಿಕೊಂಡಿದ್ದು ಇದರಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ವಸ್ತು ಪ್ರದರ್ಶನ ಭಾಗವಹಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿದರು
ಪರಿಸರವಾದಿ ಶೈಲೇಂದ್ರ ಕಾವಡಿ ಸ್ವಚ್ಛತಾಇ ಸೇವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾತದ ನೇತೃತ್ವ ವಹಿಸಿ ಮಾತನಾಡಿ ಅತ್ಯುತ್ತಮವಾಗಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಪರಿಸರ ಸಂರಕ್ಷಣೆ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮಾಡುತ್ತಿರುತ್ತಾಯಿಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಒಂದು ಕಾರ್ಯಕ್ರಮ ಜಿಲ್ಲೆಗೆ ಮಾದರಿಯಾಗಿದೆ . ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುಮ್ನಾಬಾದ್ ತಾಲೂಕಿಗೆ ಹೆಚ್ಚಿನ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತಿರುವುದಕ್ಕೆ ಸಿಇಓ ಅವರಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಸಾಯಕ ನಿರ್ದೇಶಕರುಗಳಾದ ಶಿವಲೀಲಾ, ಜಗನ್ನಾಥ್, ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮಹದೇವ ದೇಶಪಾಂಡೆ ,ನಾಗಯ್ಯ ಸ್ವಾಮಿ, ಶಿವರಾಜ್, ರಾಜಕುಮಾರ್ ಬುಳ್ಳ, ವೀರಣ್ಣ ಜಮಾದಾರ್, ರಮೇಶ್, ಮಲ್ಲಪ್ಪ ಸನ್ನದ್, ಧುಮ್ಮನಸೂರ ಗ್ರಾಮ ಪಂಚಾಯತ್ ಅಧ್ಯಕ್ಷ ವೀರಪ್ಪ ಸೇರಿದಂತೆ ಅನೇಕರು ದ್ದರು.






















