
ಕಲಬುರಗಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಲಬುರಗಿ ಜಿಲ್ಲಾ ಸಂಸ್ಥೆವತಿಯಿಂದ ಹಮ್ಮಿಕೊಂಡ ವಿಭಾಗ ಮಟ್ಟದ ದೇಶಭಕ್ತಿ ಗೀತ ಗಾಯನ ಹಾಗೂ ಜಾನಪದ ಗೀತೆ ಸ್ಪರ್ಧೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶರಣಬಸವೇಶ್ವರ ಸಂಸ್ಥೆಯ ಅಪ್ಪ ಪಬ್ಲಿಕ್ ಶಾಲೆಯಲ್ಲಿ ಬುಧವಾರ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ, ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶ್ಲಾಘಿಸಿ ಆಶೀರ್ವದಿಸಿದ್ದಾರೆ. ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ಸೀಮಾ ಪಾಟೀಲ, ಮಹಾವಿದ್ಯಾಲಯ ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಯೋಜಕಿ ಡಾ.ರಾಜಲಕ್ಷ್ಮೀ ಮತ್ತು ಶ್ರೀಮತಿ ಪ್ರಭಾವತಿ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.





















