
ಕಲಬುರಗಿ,ಅ.10-ಮನೆ ಬೀಗ ಮುರಿದು 1.30 ಲಕ್ಷ ರೂ.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಹೋಗಿರುವ ಘಟನೆ ಮಿಜಬಾ ನಗರದ ಪಟೇಲ್ ಕಾಲೋನಿಯಲ್ಲಿ ನಡೆದಿದೆ.
ಸೈಯದ್ ಸದ್ದಾಂ ಎಂಬುವವರ ಮನೆ ಬೀಗ ಮುರಿದು ಕಳ್ಳರು 1.20 ಲಕ್ಷ ರೂ.ಮೌಲ್ಯದ 20 ಗ್ರಾಂ.ಬಂಗಾರದ 4 ಉಂಗುರ, 10 ಸಾವಿರ ರೂ.ಮೌಲ್ಯದ 150 ಗ್ರಾಂ.ಬೆಳ್ಳಿ ಆರಭರಣ ಸೇರಿ 1.30 ಲಕ್ಷ ರೂ.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ.
ಇವರು ತಮ್ಮ ಪತ್ನಿಯ ಸಹೊದರ ಹೊರ ದೇಶಕ್ಕೆ ಹೋಗುತ್ತಿದ್ದಾಗ ಅವರನ್ನು ಭೇಟಿಯಾಗಲೆಂದು ಹುಮನಾಬಾದ ತಾಲ್ಲೂಕಿನ ಹಂದಿಕೇರಾ ಗ್ರಾಮಕ್ಕೆ ಹೋಗಿದ್ದ ವೇಳೆ ಮನೆ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.