Home ಜಿಲ್ಲೆ ಕಲಬುರಗಿ 8.10 ಲಕ್ಷ ರೂ.ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ

8.10 ಲಕ್ಷ ರೂ.ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ

ಕಲಬುರಗಿ,ಏ.13-ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 5 ಮನೆ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ ಮುತ್ತಗಾ ಗ್ರಾಮದ ವೀರಭದ್ರಪ್ಪ ಅಲಿಯಾಸ್ ವೀರಭದ್ರ ಸದಾಶಿವ ಪಂಚಾಳ ಎಂಬಾತನನ್ನು ಬಂಧಿಸಿ 8.80 ಲಕ್ಷ ರೂ.ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದರು.
ನಗರದ ಪೊಲೀಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಹಾಬಾದ ಸಿಪಿಐ ಎಸ್.ಸಿ.ಪಾಟೀಲ, ವಾಡಿ ಪಿಎಸ್‍ಐ ಹಾಗೂ ಸಿಬ್ಬಂದಿ ಅವರನ್ನು ಒಳಗೊಂಡ ತಂಡ ಈ ಕಳ್ಳತನ ಪ್ರಕರಣ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.