
ನಗೊಯಾ, ಅ. ೩- ಜಪಾನ್‌ನಲ್ಲಿ ನಡೆದಿರುವ ಏಷ್ಯನ್ ಕ್ರೀಡಾಕೂಟದ ಟಿ-೨೦ ಕ್ರಿಕೆಟ್‌ನಲ್ಲಿ ಭಾರತ ತಂಡ ಸ್ವರ್ಣ ಪದಕ ಗೆದ್ದಿದೆ.
ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ೧೯ ರನ್‌ಗಳಿಂದ ಮಣಿಸಿ ಚಿನ್ನಕ್ಕೆ ಮುತ್ತಿಟ್ಟಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ ೨೦ ಓವರ್‌ಗಳಲ್ಲಿ ೬ ವಿಕೆಟ್ ಕಳೆದುಕೊಂಡು ೨೧೧ ರನ್ ಗಳಿಸಿತು. ಭಾರತದ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮ ಬಿರುಸಿನ ಆಟವಾಡಿ ೬೧ ರನ್ ಗಳಿಸಿದರು.
ಭಾರತದ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ೨೦ ಓವರ್‌ಗಳಲ್ಲಿ ೬ ವಿಕೆಟ್ ಕಳೆದುಕೊಂಡು ೧೯೨ ರನ್ ಗಳಿಸಲಷ್ಟೇ ಶಕ್ತವಾಯಿತು.
ಭಾರತ ಕ್ರಿಕೆಟ್ ತಂಡ ೧೯ ರನ್‌ಗಳ ಗೆಲುವಿನ ಮೂಲಕ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕವನ್ನು ತಂದು ಕೊಟ್ಟಿದೆ.






















