Home ಜಿಲ್ಲೆ ಕಲಬುರಗಿ 1.48 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

1.48 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಕಲಬುರಗಿ,ಜು.27-ಮನೆ ಬೀಗ ಮುರಿದು 1.48 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೋಟನೂರ (ಡಿ)ಯ ದರ್ಶನಾಪೂರ ಲೇಔಟ್‍ನಲ್ಲಿ ನಡೆದಿದೆ.
ಸಿದ್ದಪ್ಪ ಸೊನ್ನದ ಎಂಬುವವರ ಮನೆ ಬೀಗ ಮುರಿದು ಕಳ್ಳರು 60 ಸಾವಿರ ರೂ.ಮೌಲ್ಯದ 10 ಗ್ರಾಂ.ಬಂಗಾರದ ಲಾಕೆಟ್, 60 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ 2 ಚೈನ್, 28 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ ಜುಮಕಿ ಮತ್ತು ಮಾಟಿ ಸೇರಿ 1.48 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.
ಸಿದ್ದಪ್ಪ ಸೊನ್ನದ ಅವರು ತಮ್ಮ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದುದ್ದರಿಂದ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಗೋಗಿ ಗ್ರಾಮಕ್ಕೆ ಹೋಗಿದ್ದರು. ಈ ವೇಳೆ ಮನೆ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.