
ಔರಾದ್ :ಮಾ.13: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಕಾಣಲು ಸಾಧ್ಯ ಎಂದು ಪತ್ರಕರ್ತ ಮಲ್ಲಪ್ಪಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ಸಂತಪುರ ಸರ್ಕಾರಿ ಪ್ರೌಢಶಾಲೆ ಯಲ್ಲಿ ವಿದ್ಯಾರ್ಥಿ ಮುಖಂಡ ಅಶೋಕ ಶೆಂಬೆಳ್ಳಿ ಅವರ ಜನ್ಮದಿನದ ಪ್ರಯುಕ್ತ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷಾ ಪ್ಯಾಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಯ ಮಕ್ಕಳು ಅತಿ ಹೆಚ್ಚು ಚಾಣಕ್ಯರಾಗಿರುತ್ತಾರೆ, ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಅರ್ಹತಾ ಪರೀಕ್ಷೆಗಳನ್ನು ಬರೆದು ನೇಮಕಾತಿ ಪಡೆದಿರುತ್ತಾರೆ, ಇವತ್ತು ಅನೇಕ ಸಾಧಕರು ಸಹ ಸರ್ಕಾರಿ ಶಾಲೆಯಲ್ಲಿ ಓದಿದವರು ಅದಕ್ಕಾಗಿ ವಿದ್ಯಾರ್ಥಿಗಳು ಇಷ್ಟ ಪಟ್ಟು ಓದುವ ಮೂಲಕ ಉತ್ತಮ ಫಲಿತಾಂಶ ನೀಡಬೇಕು. ಮತ್ತು ಸಮಾಜಕ್ಕೆ ಪ್ರೇರಣೆಯಾಗುವ ರೀತಿಯಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿಕ್ಷಕ ಶಿವಲಿಂಗ ಹೆಡೆ ಅವರು ಮಾತನಾಡಿ ಆಧುನಿಕ ಯುಗದಲ್ಲಿ ಬದುಕುತ್ತಿರುವ ನಾವು ಸಾಮಾಜಿಕ ಕಳಕಳಿ ಉಳ್ಳವರಾಗಿ ಬದುಕಬೇಕಿದೆ, ಅನೇಕರು ತಮ್ಮ ಹುಟ್ಟು ಹಬ್ಬವನ್ನು ಅನೇಕ ರೀತಿಯಲ್ಲಿ ದುಂದುವೆಚ್ಚ ಮಾಡುತ್ತಾರೆ, ಆದರೆ ವಿದ್ಯಾರ್ಥಿ ಮುಖಂಡರಾದ ಅಶೋಕ ಶೆಂಬೆಳ್ಳಿ ಅವರ ಜನ್ಮದಿನ ಪ್ರಯುಕ್ತ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರ ಮನೋಬಲ ಹೆಚ್ಚಿಸುವ ನಿಟ್ಟಿನಲ್ಲಿ ಪ್ಯಾಡ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಈ ಸಂಧರ್ಭದಲ್ಲಿ ಶಿಕ್ಷಕರಾದ ಕಲ್ಪನಾ ಉದಗಿರೆ, ಅಶೋಕ ಶೆಂಬೆಳ್ಳಿ, ಆನಂದ ದ್ಯಾಡೆ, ಅಮರಸ್ವಾಮಿ ಸ್ಥಾವರಮಠ, ಸುಕ್ಷಾಂತ ಮರತುಳೆ, ಮಲ್ಲಿಕಾರ್ಜುನ ಟೆಕರಾಜ, ಮಹಾದೇವ ಶಿಂಧೆ, ಪ್ರಾಶಾಂತ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ನಮ್ಮ ಗೆಳೆಯರ ಬಳಗ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ವಿತರಣೆ ಮಾಡುತ್ತಾ ಬರುತ್ತಿದ್ದಾರೆ. ಸಾಮಾಜಿಕ ಸಂದೇಶ ಸಾರುವ ಉದ್ದೇಶದಿಂದ ಈ ಕಾರ್ಯ ಮಾಡುತ್ತಾ ಬರುತ್ತಿದ್ದಾರೆ, ಆ ಪ್ರಯುಕ್ತ ಎಲ್ಲ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ನೀಡಿ ಶಾಲೆಯ ಹಾಗೂ ಹೆತ್ತ ತಂದೆ ತಾಯಿಯ ಕೀರ್ತಿ ಹೆಚ್ಚಿಸಬೇಕು.
ಅಶೋಕ ಶೆಂಬೆಳ್ಳಿ
ವಿದ್ಯಾರ್ಥಿ ಮುಖಂಡ.




























