Home ಜಿಲ್ಲೆ ಕಲಬುರಗಿ ಉತ್ತಮ ಚಿಂತನೆ ಉನ್ನತ ಸಾಧನೆಗೆ ಪೂರಕ

ಉತ್ತಮ ಚಿಂತನೆ ಉನ್ನತ ಸಾಧನೆಗೆ ಪೂರಕ

ಕಲಬುರಗಿ : ಫೆ.23: ಸಕಾರಾತ್ಮಕ ಆಲೋಚನೆಗಳೊಂದಿಗೆ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಬೇಕು. ಹೊಸ- ಹೊಸ ಯೋಚನೆಗಳಿಂದ ಯೋಜನೆಗಳನ್ನು ರೂಪಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ. ಹೀಗಾಗಿ ಜೀವನದಲ್ಲಿ ಯಾವುದೇ ಸಂದರ್ಭದಲ್ಲಿಯಾದರೂ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯವಾಗಿರುತ್ತದೆ. ಉತ್ತಮ ಚಿಂತನೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಶ್ರೀ ಮಲ್ಲಿನಾಥ ಮಹಾರಾಜ ಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ “ವಿಶ್ವ ಚಿಂತನೆ ದಿನಾಚರಣೆ”ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ದಿನವನ್ನು ‘ಸ್ಕೌಟ್ ಮತ್ತು ಗೈಡ್ ದಿನ’ ಎಂತಲೂ ಕರೆಯಲಾಗುತ್ತದೆ. ಈ ಸಂಸ್ಥೆಯ ಸ್ಥಾಪಕರಾದ ಲಾರ್ಡ್ ರಾಬರ್ಟ್ ಬೇಡನ್ ಪೆÇವೆಲ್ ಮತ್ತು ಲೇಡಿ ಓಲೇವ್ ಬೇಡನ್ ಪೆÇವೆಲ್ ಅವರ ಜನ್ಮದಿನದ ಸ್ಮರಣೆಗಾಗಿ ಆಚರಿಸಲಾಗುವುದು. ಮನುಷ್ಯನ ಜೀವನವು ಒಂದೇ ಕಡೆ ತಟಸ್ಥವಾಗಿರಬಾರದು, ಸದಾ ಹರಿಯುತ್ತಿರಬೇಕು. ಚಿಂತನೆಯ ಮಹತ್ವ ಸಾರಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ಸಂಸ್ಥೆಯ ಅಧ್ಯಕ್ಷ ಅಮರ ಜಿ.ಬಂಗರಗಿ, ಶಾಲೆಯ ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.