ಸರ್ಕಾರ ಸುಭದ್ರ: ದಿನೇಶ್

ಮಂಗಳೂರು,ಜೂ. ೩೦- ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂದು ಕ್ರಾಂತಿಯಾಗುತ್ತೆ ಎಂದಿದ್ದ ಸಚಿವ ಕೆ.ಎನ್ ರಾಜಣ್ಣ ಹಾಗೂ ದಸರಾವನ್ನ ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.


ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕ್ರಾಂತಿ ಅಂತಹ ಪದಗಳು ಸರಿಯಲ್ಲ. ಯಾವ ಕ್ರಾಂತಿಯೂ ಆಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ. ಬಿಜೆಪಿಯವರ ಹೇಳಿಕೆ ಗಮನಿಸಿದ್ದೇನೆ. ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎನ್ನುತ್ತಿದ್ದಾರೆ. ಅದು ತಿರುಕನ ಕನಸು. ಜನ ಬಿಜೆಪಿಗರನ್ನ ಮನೆಗೆ ಕಳಿಸಿದ್ದಾರೆ ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ಪಕ್ಷ ಗಟ್ಟಿ, ಸುಭದ್ರವಾಗಿದೆ ಎಂದರು


ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಎಲ್ಲಾ ಶಾಸಕರನ್ನ ಭೇಟಿಯಾಗಲಿದ್ದಾರೆ. ಶಾಸಕರ ಅಭಿಪ್ರಾಯವನ್ನ ಸಂಗ್ರಹಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ನಮ್ಮದು ದೊಡ್ಡ ಪಕ್ಷ ಅಭಿಪ್ರಾಯ ಬೇರೆ ಬೇರೆ ಇರುತ್ತವೆ. ನಮ್ಮ ಆಂತರಿಕ ಸಮಸ್ಯೆಯನ್ನು ನಾವೇ ಬಗೆಹರಿಸುತ್ತೇವೆ. ಸಿಎಂ ಜೊತೆ ಬಿಆರ್ ಪಾಟೀಲ್ ಮಾತನಾಡಿದ್ದಾರೆ ಮನೆ ಹಂಚಿಕೆಯಲ್ಲಿ ಭ್ರಷ್ಟಚಾರವಾಗಿದ್ದರೇ ಮಾಹಿತಿ ನೀಡಲಿ ಇಡೀ ದೇಶದಲ್ಲಿ ಭ್ರಷ್ಟಾಚಾರ ಇದೆ. ಇಲ್ಲಅಂತಾ ಹೇಳಲ್ಲ ಭ್ರಷ್ಟಾಚಾರವನ್ನ ನಿರ್ಮೂಲನೆ ಮಾಡಬೇಕು ಎಂದರು.